ರಾಜ್ಯ

ಕಡಿಮೆ ಶುಲ್ಕ ಹೊಂದಿರುವ ಖಾಸಗಿ ಶಾಲೆಗಳು ಮುಚ್ಚದಂತೆ ನೆರವಾಗಿ: ಶಿಕ್ಷಣ ಸಚಿವರಿಗೆ ಆಮ್ ಆದ್ಮಿ ಪಾರ್ಟಿ ಪತ್ರ

ಶಿಕ್ಷಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕೈಗೆಟಕುವ ದರದಲ್ಲಿ ಶುಲ್ಕ ಹೊಂದಿರುವ ರಾಜ್ಯದಲ್ಲಿನ ಖಾಸಗಿ ಶಾಲೆಗಳು ಮುಚ್ಚುವುದಕ್ಕೆ ಬಿಡಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಆಮ್ ಆದ್ಮಿ ಪಕ್ಷ ಪತ್ರದ ಮೂಲಕ ಒತ್ತಾಯಿಸಿದೆ.

ಕಡಿಮೆ ಶುಲ್ಕ ಹೊಂದಿರುವ ಖಾಸಗಿ ಶಾಲೆಗಳು ಮುಚ್ಚದಂತೆ ನೆರವಾಗಿ: ಶಿಕ್ಷಣ ಸಚಿವರಿಗೆ ಆಮ್ ಆದ್ಮಿ ಪಾರ್ಟಿ ಪತ್ರ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಶಿಕ್ಷಕರಿಗೆ ವೇತನ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಕೈಗೆಟಕುವ ದರದಲ್ಲಿ ಶುಲ್ಕ ಹೊಂದಿರುವ ರಾಜ್ಯದಲ್ಲಿನ ಖಾಸಗಿ ಶಾಲೆಗಳು ಮುಚ್ಚುವುದಕ್ಕೆ ಬಿಡಬಾರದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರಿಗೆ ಆಮ್ ಆದ್ಮಿ ಪಕ್ಷ ಪತ್ರದ ಮೂಲಕ ಒತ್ತಾಯಿಸಿದೆ.

ಆಪ್ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯದಲ್ಲಿ ಗುಣಮಟ್ಟದ ಅಗ್ಗದ ಶುಲ್ಕ ಹೊಂದಿರುವ ಖಾಸಗಿ ಶಾಲೆಗಳು ಮುಚ್ಚಿದರೆ ಸಾಮಾನ್ಯ ಜನತೆ ಗುಣಮಟ್ಟದ ಶಿಕ್ಷಣ ಪಡೆಯಲು ಎಲ್ಲಿಗೆ ಹೋಗಬೇಕು, ಸರ್ಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗದಿದ್ದರೂ ಅನಿವಾರ್ಯವಾಗಿ ಪೋಷಕರು ಕಳುಹಿಸಬೇಕಾಗುತ್ತದೆ ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಖಾಸಗಿ ಶಾಲೆಗಳು ಶುಲ್ಕ ಪಾವತಿ ವಿಷಯದಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಬಯಸುತ್ತಿವೆ. ವಿದ್ಯಾರ್ಥಿಗಳು ಪಾವತಿಸುವ ಶುಲ್ಕದೊಂದಿಗೆ ಶಿಕ್ಷಕರಿಗೆ ಪಾವತಿಸಲಾಗುತ್ತದೆ ಎಂದು ಶಾಲಾ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಪೋಷಕರು ಕಳೆದ ವರ್ಷಕ್ಕೆ ಪಾವತಿಸದ ಕಾರಣ ಮತ್ತು ಕೆಲವರು ಈ ಶೈಕ್ಷಣಿಕ ವರ್ಷವನ್ನು ಸಹ ನೋಂದಾಯಿಸದ ಕಾರಣ, ಶಾಲೆಗಳಿಗೆ ಶಿಕ್ಷಕರಿಗೆ ಪಾವತಿಸುವುದು ಕಷ್ಟಕರವಾಗಿದೆ ಎಂದು ಶಿಕ್ಷಣ ಸಚಿವರಿಗೆ ಬರೆದ ಪತ್ರದಲ್ಲಿ ಹಲವು ವಿಚಾರಗಳನ್ನು ಅವರು ವಿವರಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.