ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ: ಅನುಮತಿ ಇಲ್ಲದೇ ಈಜುಕೊಳ ನಿರ್ಮಾಣ; ತನಿಖಾ ವರದಿ
ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ.

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಆಗಿದ್ದ ಸಂದರ್ಭದಲ್ಲಿ ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿದ್ದ ವಿಚಾರ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಸಂಕಷ್ಟ ತಂದೊಡ್ಡಿದೆ.
ಜಿಲ್ಲಾಧಿಕಾರಿ ನಿವಾಸ ‘ಜಲಸನ್ನಿಧಿ’ಯಲ್ಲಿ ಈಜುಕೊಳ ನಿರ್ಮಾಣ ಮಾಡಲು ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮತಿಯನ್ನೇ ಪಡೆದಿಲ್ಲ ಎಂದು ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಹೇಳಿದೆ.
ಸ್ವಿಮ್ಮಿಂಗ್ ಪೂಲ್ ನಿರ್ಮಾಣ ಸಂಬಂಧ ಪ್ರಾದೇಶಿಕ ಆಯುಕ್ತರು ರಾಜ್ಯ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಿದ್ದಾರೆ. ಈಜುಕೊಳ ನಿರ್ಮಾಣಕ್ಕೆ 32 ಲಕ್ಷ ರೂಪಾಯಿ ವೆಚ್ಚವಾಗಿದೆ. ಇದಕ್ಕೆ ತಾಂತ್ರಿಕ ವರ್ಗದಿಂದ ,ಲೋಕೋಪಯೋಗಿ ಇಲಾಖೆಯಿಂದ ಅನುಮತಿಯನ್ನೇ ಪಡೆದಿಲ್ಲ. ಆಡಳಿತಾತ್ಮಕ ಮಂಜೂರಾತಿಯನ್ನು ಪಡೆದಿಲ್ಲ ಎಂದು ವರದಿ ನೀಡಿರುವುದು ರೋಹಿಣಿ ಸಿಂಧೂರಿಗೆ ತೀವ್ರ ಹಿನ್ನಡೆಯಾಗಿದೆ.
ಪ್ರಾದೇಶಿಕ ಆಯುಕ್ತ ಜಿ.ಸಿ.ಪ್ರಕಾಶ್ ಅವರು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಿರುವ ವರದಿಯು ಮಾಧ್ಯಮಗಳಿಗೆ ಸೋರಿಕೆಯಾಗಿದ್ದು, ಪ್ರಮುಖವಾಗಿ 6 ನ್ಯೂನತೆಗಳು ತನಿಖೆ ವೇಳೆ ಕಂಡುಬಂದಿರುವುದಾಗಿ ತಿಳಿಸಿದೆ.
ನಗರಾಭಿವೃದ್ಧಿ ಇಲಾಖೆಯು 2020ರ ಏ. 21ರಂದು ಹೊರಡಿಸಿದ ಅಧಿಸೂಚನೆಯಂತೆ ಪಾರಂಪರಿಕ ಕಟ್ಟಡ ಗಳ ಸಂರಕ್ಷಣೆ, ನವೀಕರಣ ಕೆಲಸ ಮಾಡಬೇಕಾದರೆ ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆಯಬೇಕು. ಆದರೆ, ಈಜುಕೊಳ ನಿರ್ಮಾಣಕ್ಕೆ ಅನುಮೋದನೆ ಪಡೆದಿಲ್ಲ ಎಂದಿದೆ.
ಮನೆಯಲ್ಲಿ ಈಜುಕೊಳ ನಿರ್ಮಿಸಿಕೊಂಡಿರುವುದರಿಂದ ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ. ಈಜುಕೊಳ ನಿರ್ಮಾಣ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ. ಹೀಗಾಗಿ ಈಜುಕೊಳ ನಿರ್ಮಾಣವೇ ಅಕ್ರಮ, ಕಾನೂನಿಗೆ ವಿರುದ್ದವಾಗಿ ನಿರ್ಮಿಸಲಾಗಿದೆ. ರೋಹಿಣಿ ಸಿಂಧೂರಿ ಅಧಿಕಾರ ದುರ್ಬಳಕೆ ಮಾಡಿಕೊಂಡು ನಿರ್ಮಿಸಿರುವುದಾಗಿ ಪ್ರಾದೇಶಿಕ ಆಯುಕ್ತರು ವರದಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


