ವಕ್ಫ್ ಆಸ್ತಿ ಕಬಳಿಕೆ: ಸದನದಲ್ಲಿ ವರದಿ ಮಂಡನೆಯ ವಿವರ ಕೇಳಿದ ಹೈಕೋರ್ಟ್
ರಾಜ್ಯದ ವಕ್ಫ್ ಆಸ್ತಿಗಳ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.

ಬೆಂಗಳೂರು: ರಾಜ್ಯದ ವಕ್ಫ್ ಆಸ್ತಿಗಳ ಕಬಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಅಲ್ಪಸಂಖ್ಯಾತರ ಆಯೋಗ ಸಲ್ಲಿಸಿರುವ ವಿಶೇಷ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ವಕ್ಫ್ ಆಸ್ತಿ ದುರ್ಬಳಕೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗ 2012ರಲ್ಲಿ ಸಲ್ಲಿಸಿರುವ ವಿಶೇಷ ವರದಿ ಆಧರಿಸಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ದುರ್ಬಳಕೆಯನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮಾಜಿ ಸಚಿವ ಎಸ್.ಕೆ. ಕಾಂತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮಂಗಳವಾರ ಮುಖ್ಯ ನ್ಯಾಯಮೂರ್ತಿ ಎ. ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಕೆಲ ಕಾಲ ವಾದ - ಪ್ರತಿವಾದ ಆಲಿಸಿದ ಪೀಠ, ರಾಜ್ಯದಲ್ಲಿ ವಕ್ಫ್ ಆಸ್ತಿಗಳ ಒತ್ತುವರಿ ಹಾಗೂ ರ್ದುಬಳಕೆಗೆ ಸಂಬಂಧಿಸಿದಂತೆ ಆಯೋಗ ಸಲ್ಲಿಸಿರುವ ವರದಿಯ ಶಿಫಾರಸುಗಳನ್ನು ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿರುವ ಬಗ್ಗೆ ವಿವರ ನೀಡಬೇಕು. ಅದೇ ರೀತಿ ಆಯೋಗದ ವರದಿ ಆಧರಿಸಿ ಲೋಕಾಯುಕ್ತ ಸಂಸ್ಥೆಯು 2016ರಲ್ಲಿ ನೀಡಿದ ವರದಿ ಮೇರೆಗೆ ಕರ್ನಾಟಕ ಲೋಕಾಯುಕ್ತ ಕಾಯ್ದೆ-1984ರ ಸೆಕ್ಷನ್ 12 (2) ಪ್ರಕಾರ ಕೈಗೊಂಡ ಕ್ರಮಗಳ ಮಾಹಿತಿ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಆಗಸ್ಟ್ 8ಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


