ಮಡಿಕೇರಿ ಎಸ್ಟೇಟ್ ನಲ್ಲಿ ಹಸುವಿಗೆ ಗುಂಡಿಕ್ಕಿ ಹತ್ಯೆ: ಗೋಮಾಂಸ ಮಾರಾಟ ಶಂಕೆ?
ಮಡಿಕೇರಿಯ ಎಸ್ಟೇಟ್ ವೊಂದರಲ್ಲಿ ದುಷ್ಕರ್ಮಿಗಳು ಹಸುವನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ, ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಎಫ್ ಐ ಆರ್ ದಾಖಲಾಗಿದೆ.

ಮಡಿಕೇರಿ: ಮಡಿಕೇರಿಯ ಎಸ್ಟೇಟ್ ವೊಂದರಲ್ಲಿ ದುಷ್ಕರ್ಮಿಗಳು ಹಸುವನ್ನು ಗುಂಡಿಟ್ಟು ಕೊಂದ ಘಟನೆ ನಡೆದಿದೆ, ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ನಡೆದಿದ್ದು, ಈ ಸಂಬಂಧ ಎಫ್ ಐ ಆರ್ ದಾಖಲಾಗಿದೆ.
ತಾಲೂಕಿನ ಕಗ್ಗೋಡ್ಲು ಗ್ರಾಮದಲ್ಲಿ ಹಸುವಿಗೆ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದು. ಮಂಗಳವಾರ ಸಂಜೆ 7 ಗಂಟೆಗೆ ಪ್ರಕರಣ ನಡೆದಿದ್ದು, ವಿಷಯ ತಿಳಿದು ಸ್ಥಳಕ್ಕೆ ಹಿಂದು ಜಾಗರಣ ವೇದಿಕೆಯ ಕಾರ್ಯಕರ್ತರು ಸೇರಿದ್ದರು ಎಂದು ಹಿಂದೂ ಜಾಗರಣ ವೇದಿಕೆ ಸದಸ್ಯ ಯತೀಶ್ ಬಿಕೆ ತಿಳಿಸಿದ್ದಾರೆ,
ನಾಲ್ಕು ದಿಕ್ಕುಗಳಿಂದ ಕಾರ್ಯಕರ್ತರು ಸುತ್ತುವರಿದಿದ್ದರು. ಈ ವೇಳೆ ಮುಂಚೂಣಿ ತಂಡದ ಕಾರ್ಯಕರ್ತನ ಎದೆಗೆ ಕೋವಿಯಿಟ್ಟು ಬೆದರಿಸಿ ದುಷ್ಕರ್ಮಿಗಳು ಕತ್ತಲಲ್ಲಿ ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೋಲೀಸರ ಆಗಮಿಸಿದ್ದು, ಸ್ಥಳದಲ್ಲಿದ್ದ ಗೋಮಾಂಸ ಮತ್ತು ಚಾಕು ವಶಪಡಿಸಿಕೊಂಡಿದ್ದಾರೆ.
ಪ್ರಕರಣ ಹಿನ್ನೆಲೆ ಕಗ್ಗೋಡ್ಲು ಗ್ರಾಮದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಆರೋಪಿಗಳನ್ನು ಶೀಘ್ರವೇ ಬಂಧಿಸುವುದಾಗಿ ಪೋಲೀಸರು ಭರವಸೆ ನೀಡಿದ್ದಾರೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


