ಎಸ್ಎಸ್ಎಲ್'ಸಿ ಪರೀಕ್ಷೆಗೂ ಮುನ್ನ ಶಿಕ್ಷಕರಿಗೆ ಲಸಿಕೆ ನೀಡಲು ಕ್ರಮವಹಿಸಿ: ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ
ಜುಲೈ ಮೂರನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್'ಸಿ ಪರೀಕ್ಷಾ ಕಾರ್ಯದಲ್ಲಿ ತೊಗಡುವ ಎಲ್ಲಾ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಬೆಂಗಳೂರು: ಜುಲೈ ಮೂರನೇ ವಾರದಲ್ಲಿ ನಡೆಸಲು ಉದ್ದೇಶಿಸಿರುವ ಎಸ್ಎಸ್ಎಲ್'ಸಿ ಪರೀಕ್ಷಾ ಕಾರ್ಯದಲ್ಲಿ ತೊಗಡುವ ಎಲ್ಲಾ ಅಧಿಕಾರಿಗಳು, ಶಿಕ್ಷಕರು ಮತ್ತು ಇತರೆ ಸಿಬ್ಬಂದಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಈ ಸಂಬಂಧ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು, ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗಲಿರುವ ಅಧಿಕಾರಿಗಳು, ಶಿಕ್ಷಕರು ಮತ್ತು ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದ್ದಾರೆ.
ಈ ಬಾರಿಯ ಎಸ್ಎಸ್ಎಲ್'ಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ 6000ಕ್ಕೂ ಹೆಚ್ಚಿನ ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಅಧಿಕಾರಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯ ಪಟ್ಟಿಯನ್ನು ಆಯಾ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ನೀಡಲಿದ್ದು, ಅವರೆಲ್ಲರಿಗೂ ಪರೀಕ್ಷೆ ಆರಂಭಕ್ಕೂ ಮುನ್ನವೇ ಲಸಿಕೆ ದೊರೆಯುವಂತೆ ಮಾಡಿ ಎಂದು ಸೂಚಿಸಿದ್ದಾರೆಂದು ತಿಳಿದುಬಂದಿದೆ.
ಇದೇ ವೇಳೆ ಜುಲೈ 3ನೇ ವಾರದಲ್ಲಿ ನಡೆಯಲಿರುವ 2020-21ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಪ್ರಕ್ರಿಯೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಈಗಾಗಲೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಬೆಂಗಳೂರು ನಗರದ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಬಿಬಿಎಂಪಿ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ.
ಶಿಕ್ಷಕರು ಕೋವಿಡ್ ಲಸಿಕೆ ಪಡೆಯುವುದು ಮತ್ತು ಪರೀಕ್ಷಾ ಪೂರ್ವ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕಿರುವುದು ಮತ್ತು ಈಗಾಗಲೇ ಶೈಕ್ಷಣಿಕ ಚುಟುವಟಿಕೆಗಳು ಪ್ರಾರಂಭಗೊಂಡಿದ್ದು, ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಹ ನಡೆಯುತ್ತಿರುವುದರಿಂದ ಶಿಕ್ಷಕರು ಶಾಲಾ ಕರ್ತವ್ಯದಲ್ಲಿ ಭಾಗಿಯಾಗಿರಬೇಕಿರುವುದರಿಂದ ತಕ್ಷಣವೇ ಶಿಕ್ಷಕರನ್ನು ಕೋವಿಡ್ ಕರ್ತವ್ಯದಿಂದ ಬಿಡುಗಡೆಗೊಳಿಸಬೇಕೆಂದು ಸಚಿವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


