ನಗರದಲ್ಲಿ ಕೊರೋನಾ ಇಳಿಮುಖ: ನಿನ್ನೆ ಕೇವಲ 614 ಕೇಸ್ ಪತ್ತೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಹೊಸ ಸೋಂಕು ಪ್ರಕರಣ ತೀವ್ರವಾಗಿ ಕುಸಿತ ಕಂಡಿದ್ದು, ಶುಕ್ರವಾರ ಕೇವಲ 614 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ.

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಹೊಸ ಸೋಂಕು ಪ್ರಕರಣ ತೀವ್ರವಾಗಿ ಕುಸಿತ ಕಂಡಿದ್ದು, ಶುಕ್ರವಾರ ಕೇವಲ 614 ಹೊಸ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಅಬ್ಬರ ಇಳಿಕೆಯಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ.
ಕೋವಿಡ್-19 ಎರಡನೇ ಅಲೆಯ ಏರಿಕೆ ಗತಿಯಲ್ಲಿ ಚಲಿಸುವ ಆರಂಭಕ್ಕೂ ಮುನ್ನ ಅಂದರೆ ಮಾ.15ರಂದು ನಗರದಲ್ಲಿ 550 ಸೋಂಕಿತ ಪ್ರಕಱಣ ಪತ್ತೆಯಾಗಿತ್ತು. ಇದಾದ ನಂತರ ಸೋಂಕು ಅಂಕೆ ಮೀರಿ ಬೆಳೆಯತೊಡಗಿತ್ತು. ಈ ಏರಿಕೆಯ ನಂತರ 500-600ರ ಗಡಿಗೆ ಸೋಂಕು ಬಂದಿರಲಿಲ್ಲ. ಆದರೆ, ಶುಕ್ರವಾರ 614 ಹೊಸ ಪ್ರಕರಣಗಳು ದಾಖಲಾಗಿವೆ.
ನಗರದಲ್ಲಿ 614 ಹೊಸ ಸೋಂಕಿತರ ಪ್ರಕರಣಗಳೊಂದಿಗೆ ಈ ವರೆಗಿನ ಒಟ್ಟು ಸೋಂಕಿತರ ಸಂಖ್ಯೆ 12,09,687ಕ್ಕೆ ಏರಿಕೆಯಾಗಿದೆ. ಒಂದೇ ದಿನ 17 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈ ವರೆಗೂ ನಗರದಲ್ಲಿ 15,554 ಮಂದಿ ಸಾವನ್ನಪ್ಪಿದ್ದಾರೆ.
ಇನ್ನು ರಾಜ್ಯದಲ್ಲಿ ನಿನ್ನೆ 3,310 ಪ್ರಕರಣಗಳು ಪತ್ತೆಯಾಗಿದ್ದು, 114 ಮಂದಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಶೇ.2.09 ಪಾಸಿಟಿವಿಟಿ ದರ ದಾಖಲಾಗಿದ್ದು, ಈ ಮೂಲಕ ಕೊರೋನಾ ಎರಡನೇ ಅಲೆಯ ಏರಿಕೆ ಗತಿ ಆರಂಭವಾದ ದಿನಗಳಿಗೆ ಪಾಸಿಟಿವಿಟಿ ದರ ಹಿಂತಿರುಗಿದೆ.
ಕೊರೋನಾ ಎರಡನೇ ಅಲೆ ಆರಂಭವಾದ ಸಮಯದಲ್ಲಿ ಅತೀ ಹೆಚ್ಚು ಪಾಸಿಟಿವಿಟಿ ಪ್ರಕರಣಗಳನ್ನು ಹೊಂದಿದ್ದ ದೇಶದ ಟಾಪ್ 10 ರಾಜ್ಯದ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ರಾಜ್ಯ ಇದೀಗ ಮೂರನೇ ಸ್ಥಾನಕ್ಕೆ ಇಳಿದಿದೆ.
ಅತೀ ಹೆಚ್ಚು ಸೋಂಕು ಪ್ರಕರಣಗಳನ್ನು ಹೊಂದಿದ ರಾಜ್ಯದಲ್ಲಿ ಮಹಾರಾಷ್ಟ್ರ 60,000,00 ಹೆಚ್ಚು ಪ್ರಕರಣಗಳೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, 28,65,872 ಪ್ರಕರಣಗಳೊಂದಿಗೆ ಕೇರಳ ಎರಡನೇ ಸ್ಥಾನದಲ್ಲಿದೆ. ಇನ್ನು ಕರ್ನಾಟಕ 28,26,754 ಪ್ರಕರಣಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.
ಆದರೆ, ಕೇರಳಕ್ಕಿಂತಲೂ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಹೆಚ್ಚಾಗಿದೆ. ಕೇರಳ ರಾಜ್ಯದಲ್ಲಿ 1,00,234 ಸಕ್ರಿಯ ಪ್ರಕರಣಗಳಿದ್ದರೆ, ರಾಜ್ಯದಲ್ಲಿ 1,07,195 ರಷ್ಟಿದೆ. ಇನ್ನು ಮಹಾರಾಷ್ಟ್ರದಲ್ಲಿ 1,21,767 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


