ರಾಜ್ಯದಲ್ಲಿ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿ ವೈರಸ್ ನಿಯಂತ್ರಣದಲ್ಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ.
ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಸಚಿವರು ಹಾಗು ಅಧಿಕಾರಿಗಳ ಜೊತೆ ಕೋವಿಡ್-19 ರ ರೂಪಾಂತರಿ ಡೆಲ್ಟಾ ಬಗ್ಗೆ ರಾಜ್ಯದಲ್ಲಿರುವ ಪ್ರಸ್ತುತ ಇರುವ ಪರಿಸ್ಥಿತಿ ಯ ಬಗ್ಗೆ ಪರಾಮರ್ಶೆ ಸಭೆ ನಡೆಸಿದರು.
ಸಭೆಯಲ್ಲಿ ರಾಜ್ಯದಲ್ಲಿ ಡೆಲ್ಟಾ ವೈರಸ್ ಸಧ್ಯಕ್ಕೆ ಹತೋಟಿಯಲ್ಲಿದ್ದು, ವೈರಸ್ ಬಗ್ಗೆ ತೀವ್ರ ನಿಗಾ ಇಡುವಂತೆಯೂ ಗಡಿಭಾಗದಲ್ಲಿ ಮಹಾರಾಷ್ಟ್ರ ದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿರುವುದರಿಂದ ಬಾರ್ಡರ್ ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಹಾಗೂ ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆನು ಸಹ ತೀವ್ರ ನಿಗಾ ಇಟ್ಟು ಅವರನ್ನು ಕೊರೋನಾ ಟೆಸ್ಟ್'ಗೆ ಒಳಪಡಿಸುವಂತೆ ಸೂಚಿಸಿದರು.
ಕೇರಳ ಹಾಗು ಮಹಾರಾಷ್ಟ್ರದಲ್ಲಿ ಎರಡನೇ ಅಲೆಯ ತೀವ್ರತೆ ಕಡಿಮೆಯಾಗದಿರುವ ಆತಂಕ ವ್ಯಕ್ತಪಡಿಸಿ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಗೊಳಿಸಿದರು ಎಚ್ಚರಿಕೆಯಿಂದ ಇರುವಂತೆ ರಾಜ್ಯದ ಜನರಿಗೆ ಮನವಿ ಮಾಡಲಾಯಿತು.
ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪೌಷ್ಟಿಕ ಆಹಾರ ಒದಗಿ ವೈದ್ಯಕೀಯ ನಿಗಾ ವಹಿಸಲು ಸೂಚಿಸಲಾಯಿತು. ಕಲ್ಯಾಣ ಮಂಟಪ ಹೋಟೆಲ್ ಪಾರ್ಟಿ ಹಾಲ್ ಮತ್ತು ರೆಸಾರ್ಟ್ ಗಳಲ್ಲಿ 40 ಜನ ಕ್ಕೆ ಸೀಮಿತಗೊಳಿಸಿ ಅನುಮತಿ ತೆಗೆದುಕೊಂಡು ವೈಯಕ್ತಿಕ ಪಾಸ್ ಗಳೊಂದಿಗೆ ಸೋಮವಾರ ದಿಂದ ಜಾರಿಗೆ ಬರುವಂತೆ ಮದುವೆ ಸಮಾರಂಭಗಳಿಗೆ ಅನುಮತಿ ನೀಡಲು ಸಭೆಯಲ್ಲಿ ತೀರ್ಮಾನಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


