ರಾಜ್ಯ

ಸಿಡಿ ಪ್ರಕರಣ: ಪಿಐಎಲ್‌ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಸುವಂತಿಲ್ಲ- ಹೈಕೋರ್ಟ್‌ ಸೂಚನೆ

ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಸಿಡಿ ಪ್ರಕರಣ: ಪಿಐಎಲ್‌ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಸುವಂತಿಲ್ಲ- ಹೈಕೋರ್ಟ್‌ ಸೂಚನೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಬಾಕಿ ಇರುವಾಗ ತನಿಖೆಯ ಅಂತಿಮ ವರದಿ ಸಲ್ಲಿಕೆ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಸೂಚನೆ ನೀಡಿತು. 

ತನಿಖೆಯನ್ನು ಬೇರೆ ಸಂಸ್ಥೆಗೆ ವರ್ಗಾಯಿಸಬೇಕು ಎಂಬ ಮನವಿ ಆಧರಿಸಿ ವಿಚಾರಣೆಗಳು ನಡೆಯುತ್ತಿವೆ. ಇದರ ನಡುವೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ಪೂರ್ಣಗೊಳಿಸಿ ಅಂತಿಮ ವರದಿ ಸಲ್ಲಿಸುವ ಆತಂಕ ಇದೆ’ ಎಂದು ಸಂತ್ರಸ್ತೆ ಪರ ಹಾಜರಾಗಿದ್ದ ಹಿರಿಯ ವಕೀಲೆ ಇಂದಿರಾ ಜೈಸಿಂಗ್ ಆತಂಕ ವ್ಯಕ್ತಪಡಿಸಿದರು.

ಇದನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಈ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 5ಕ್ಕೆ ಮುಂದೂಡಿತು.

ಇನ್ನೊಂದೆಡೆ, ರಮೇಶ ಜಾರಕಿಹೊಳಿ ದೂರು ಆಧರಿಸಿ ನಡೆಸುತ್ತಿರುವ ತನಿಖೆ ಪ್ರಶ್ನಿಸಿ ಮತ್ತು ಎಸ್‌ಐಟಿ ಸ್ವತಂತ್ರವಾಗಿ ತನಿಖೆ ನಡೆಸುತ್ತಿಲ್ಲ ಎಂದು ಆರೋಪಿಸಿ ಸಂತ್ರಸ್ತೆ ಏಕ ಸದಸ್ಯ ಪೀಠದ ಮುಂದೆ ಸಲ್ಲಿಸಿದ್ದ ಎರಡು ಅರ್ಜಿಗಳನ್ನೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ಜೊತೆಗೆ ವಿಭಾಗೀಯ ಪೀಠ ಸೇರ್ಪಡೆಗೊಳಿಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.