ರಾಜ್ಯ

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ
ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಮತ್ತು ಅವರ ಪತಿ ಕದಿರೇಶ್
Published On :

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ.

ನಿನ್ನೆಯಷ್ಟೇ ಪ್ರಕರಣದ ಪ್ರಮುಖ ಆರೋಪಿಗಳಾದ ಪೀಟರ್ ಮತ್ತು ಸೂರ್ಯ ಎಂಬುವವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದರು.

ಪ್ರಕರಣ ಸಂಬಂಧ ಇಂದು ಪೊಲೀಸರು ನಗರದ ಮೂರು ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದ್ದು, ಮತ್ತೆ ಮೂವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಇದರೊಂದಿಗೆ ಒಟ್ಟು ಐವರು ಆರೋಪಿಗಳು ಬಂಧನಕ್ಕೊಳಗಾದಂತಾಗಿದೆ.

ಗುರುವಾರ ಬೆಳಗ್ಗೆ 10.10ರ ಸುಮಾರಿಗೆ ಮನೆಯಿಂದ ಸುಮಾರು ನೂರು ಮೀಟರ್‌ ದೂರದಲ್ಲಿರುವ ಕಚೇರಿಯಲ್ಲಿ ರೇಖಾ ಕದಿರೇಶ್ ಅವರು ಎಂದಿನಂತೆ ಬಡವರಿಗೆ ಊಟ ವಿತರಿಸಿ ಮನೆಗೆ ಹಿಂದಿರುಗುತ್ತಿದ್ದರು. ಬೈಕ್‌ ನಲ್ಲಿ ಬಂದ ಇಬ್ಬರು ಆಗಂತುಕರು ರೇಖಾ ಅವರ ಹೊಟ್ಟೆ ಸೇರಿ ದೇಹದ ವಿವಿಧೆಡೆ 15ಕ್ಕೂ ಅಧಿಕ ಬಾರಿ ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿದ್ದರು.

ಮೂರು ವರ್ಷಗಳ ಹಿಂದೆ ಛಲವಾದಿಪಾಳ್ಯ ವಾರ್ಡ್‌ನ ಮುನೇಶ್ವರ ದೇವಾಲಯದ ಬಳಿ ಕದಿರೇಶ್‌ ಅವರನ್ನು ಹತ್ಯೆಗೈದ ಮಾದರಿಯಲ್ಲೇ ಅವರ ಪತ್ನಿ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನೂ ಕೂಡ ನಡು ಬೀದಿಯಲ್ಲಿ ಭೀಕರವಾಗಿ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.