ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣ ಬಿಎಸ್'ವೈ ಚಿಂತನೆ
ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಕುರಿತಾಗಿ ಸೂಕ್ತ ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ಬಸವಣ್ಣನವರ ಪುತ್ಥಳಿ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚಿಂತನೆ ನಡೆಸಿದ್ದು, ಕುರಿತಾಗಿ ಸೂಕ್ತ ಪ್ರಸ್ತಾವಣೆಯೊಂದಿಗೆ ಕಡತವನ್ನು ಮಂಡಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
12 ನೇ ಶತಮಾನದಲ್ಲಿ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವಕ್ಕೆ ಬುನಾದಿ ಹಾಕಿದ ಸಮಾನತೆಯ ಹರಿಕಾರ ಬಸವಣ್ಣನವರ ಪುತ್ಥಳಿಯನ್ನು ಪ್ರಜಾಪ್ರಭುತ್ವದ ದೇಗುಲವಾದ ವಿಧಾನಸೌಧದ ಆವರಣದಲ್ಲಿ ನಿರ್ಮಿಸುವುದರಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮುಖುಟಪ್ರಾಯವಾಗುತ್ತದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಿದೆ.
9/6/2021ರಂದು ಮುಖ್ಯಮಂತ್ರಿಗಳು ಈ ಕುರಿತ ಟಿಪ್ಪಣಿಗೆ ಸಹಿ ಹಾಕಿದ್ದಾರೆ. ವಿಧಾನಸೌಧದ ಆವರಣದಲ್ಲಿ ಜಗಜ್ಯೋತಿ ಶ್ರೀ ಬಸವಣ್ಣನವರ ಪುತ್ಥಳಿಯನ್ನು ಸ್ಥಾಪಿಸಲು ಸೂಕ್ತ ಪ್ರಸ್ತಾವನೆಯೊಂದಿಗೆ ಕಡತವನ್ನು ಮಂಡಿಸಲು ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಈ ಕುರಿತು ಪ್ರತಿಕ್ರಿಯೆ ನೀಡಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ಇದೊಂದು ಉತ್ತಮ ಚಿಂತನೆ. ಈ ಕುರಿತು ಕಾನೂನಾತ್ಮಕವಾಗಿ ಪರಿಶೀಲನೆ ನಡೆಸುವ ಅಗತ್ಯವಿದೆ. ಐದು ವರ್ಷಗಳ ಹಿಂದಷ್ಟೇ ಸಾರ್ವಜನಿಕ ಪ್ರದೇಶಗಳಲ್ಲಿ ಯಾವುದೇ ರೀತಿಯ ಹೊಸ ಪ್ರತಿಮೆಗಳನ್ನು ಸ್ಥಾಪನೆ ಮಾಡಬಾರದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹೀಗಾಗಿ ಈ ಕುರಿತು ಪರಿಶೀಲನೆ ನಡೆಸುವ ಅಗತ್ಯವಿದೆ ಎಂದು ಹೇಳಿದ್ದಾರೆ.
ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಣಿ ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಈಗಾಗಲೇ ಸಾಕಷ್ಟು ಪ್ರತಿಮೆಗಳಿವೆ. ರೂ.500 ಕೋಟಿ ವೆಚ್ಚದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಬಸವಕಲ್ಯಾಣದಲ್ಲಿ ಅನುಭವ ಮಂಟಪವನ್ನು ನಿರ್ಮಾಣ ಮಾಡುತ್ತಿದೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


