ಕೋವಿಡ್ ಲಸಿಕೆ ಪಡೆಯದವರಿಗೆ ಡೆಲ್ಟಾ ಸೋಂಕಿನ ಭೀತಿ ಹೆಚ್ಚು- ಗೌರವ್ ಗುಪ್ತಾ
ಕೋವಿಡ್ ಲಸಿಕೆ ಪಡೆಯದವರಿಗೆ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಆದ್ದರಿಂದ ಜನರ ಮನೆ ಬಾಗಿಲಿನಲ್ಲೇ ಲಸಿಕೆ ಒದಗಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದರು.

ಬೆಂಗಳೂರು: ಕೋವಿಡ್ ಲಸಿಕೆ ಪಡೆಯದವರಿಗೆ ಡೆಲ್ಟಾ ಅಥವಾ ಡೆಲ್ಟಾ ಪ್ಲಸ್ ಸೋಂಕು ತಗಲುವ ಸಾಧ್ಯತೆ ಹೆಚ್ಚು. ಆದ್ದರಿಂದ ಜನರ ಮನೆ ಬಾಗಿಲಿನಲ್ಲೇ ಲಸಿಕೆ ಒದಗಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಹೇಳಿದರು.
ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ಲಸಿಕೆ ಪಡೆದವರಿಗೆ ಸೋಂಕು ತಗುಲಿದರೂ ಅದರ ಪರಿಣಾಮ ತೀವ್ರವಾಗಿರುವುದಿಲ್ಲ. ಆದ್ದರಿಂದ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿರುವ ಕಚೇರಿಗಳಲ್ಲಿ ಈಗಾಗಲೇ ಲಸಿಕಾ ಶಿಬಿರಗಳನ್ನು ಈಗಾಗಲೇ ಹಮ್ಮಿಕೊಳ್ಳುತ್ತಿದ್ದೇವೆ. ಲಸಿಕೆಯ ಲಭ್ಯತೆ ಆಧಾರದಲ್ಲಿ ಶಿಬಿರಗಳನ್ನು ಏರ್ಪಡಿಸಲಿದ್ದೇವೆ ಎಂದರು.
ಶುಕ್ರವಾರ ಹಾಗೂ ಶನಿವಾರ ತಲಾ 1 ಲಕ್ಷಕ್ಕೂ ಅಧಿಕ ಮಂದಿಗೆ ಲಸಿಕೆ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ನಗರದ ಎಲ್ಲ ವಯಸ್ಕರು ಲಸಿಕೆ ಪಡೆಯಲಿದ್ದಾರೆ. ಜುಲೈ ಅಂತ್ಯದ ಒಳಗೆ ನಗರದ ನಿವಾಸಿಗಳಲ್ಲಿ ಶೇ 70ರಷ್ಟು ವಯಸ್ಕರು ಲಸಿಕೆ ಪಡೆಯಲಿದ್ದಾರೆ ಎಂದು ಗೌರವ್ ಗುಪ್ತಾ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


