ರಾಜ್ಯ

ಚಾಮರಾಜನಗರ ದುರಂತ: ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ ವಿತರಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ 

ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಮೃತರ ಕುಟುಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನು ಕೂಡ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಚಾಮರಾಜನಗರ ದುರಂತ: ಮೃತರ ಕುಟುಂಬಸ್ಥರಿಗೆ ತಲಾ 1 ಲಕ್ಷ ರೂ ವಿತರಿಸಿದ ಕಾಂಗ್ರೆಸ್ ಅಧ್ಯಕ್ಷ ಡಿ ಕೆ ಶಿವಕುಮಾರ್ 
ಡಿ ಕೆ ಶಿವಕುಮಾರ್
Published On :

ಚಾಮರಾಜನಗರ: ರಾಜ್ಯ ಸರ್ಕಾರ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ ರೋಗಿಗಳು ಮೃತಪಟ್ಟ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿಲ್ಲ. ಮೃತರ ಕುಟುಂಬಸ್ಥರ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನು ಕೂಡ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆರೋಪಿಸಿದ್ದಾರೆ.

ಇಂದು ಮೃತರ ಕುಟುಂಬಸ್ಥರ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ವತಿಯಿಂದ ತಲಾ ಒಂದು ಲಕ್ಷ ರೂಪಾಯಿ ಪರಿಹಾರದ ಚೆಕ್ ನ್ನು ವಿತರಿಸಿದರು. ನಂತರ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರ ಜಿಲ್ಲಾಸ್ಪತ್ರೆ ದುರಂತಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ, ಈ ವಿಚಾರವನ್ನು ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು ಕೇವಲ ಶಿವಮೊಗ್ಗಕ್ಕೆ ಮಾತ್ರ ಸಿಎಂ ಅಲ್ಲ, ಇಡೀ ರಾಜ್ಯಕ್ಕೆ ಅವರು ಮುಖ್ಯಮಂತ್ರಿಗಳು. ಇಡೀ ರಾಜ್ಯದ ಜನತೆಯ ಯೋಗಕ್ಷೇಮ, ಕಷ್ಟ-ಸುಖಗಳನ್ನು ಅವರು ವಿಚಾರಿಸಬೇಕಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.