ಕೌಟುಂಬಿಕ ಕಲಹ: ಬಳ್ಳಾರಿಯಲ್ಲಿ ಮಕ್ಕಳಿಬ್ಬರ ಉಸಿರು ನಿಲ್ಲಿಸಿ ತಾಯಿ ಆತ್ಮಹತ್ಯೆ
ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.

ಬಳ್ಳಾರಿ: ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ನೀರಿನ ಟ್ಯಾಂಕ್ ನಲ್ಲಿ ಮುಳುಗಿಸಿ ತಾನೂ ಆತಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯ ಇಂದಿರಾ ನಗರದಲ್ಲಿ ವರದಿಯಾಗಿದೆ.
ಮೃತರನ್ನು ಬಳ್ಳಾರಿ ಇಂದಿರಾ ನಗರದ ಏಳನೇ ಅಡ್ಡರಸ್ತೆಯ ನಿವಾಸಿ ಸಿದ್ದಪ್ಪನವರ ಪತ್ನಿ ಸುನೀತಾ (25) ಮತ್ತು ಆಕೆಯ 2 ವರ್ಷದ ಮಗ ಹಾಗೂ 10 ತಿಂಗಳ ಹೆಣ್ಣು ಮಗುವೆಂದು ಗುರುತಿಸಲಾಗಿದೆ.
ಪತಿ ಪತ್ನಿಯರಲ್ಲಿ ಯಾವಾಗಲೂ ಕ್ಷುಲ್ಲಕ ಕಾರಣಗಳಿಗೆ ಜಗಳವಾಗುತ್ತಿತ್ತು. ನಿನ್ನೆ ಸಹ ಸಣ್ಣ ವಿಚಾರಕ್ಕೆ ಮನಸ್ತಾಪವಾಗಿತ್ತು. ಇದರಿಂದ ಬೇಸರಗೊಂಡ ಸುನೀತಾ ಮನೆಯ ಮುಂಭಾಗದಲ್ಲಿರುವ ನೀರಿನ ಟ್ಯಾಂಕ್ ನಲ್ಲಿ ತನ್ನಿಬ್ಬರು ಮಕ್ಕಳನ್ನು ಮುಳುಗಿಸಿ ಕೊಂದು ಬಳಿಕತಾನೂ ನೀರಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಘಟನೆ ಸಂಬಂಧ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


