4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಶೌಚಗುಂಡಿಯಲ್ಲಿ ಪತ್ತೆ
ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಮನೆಯ ಹಿಂಭಾಗದ ಶೌಚಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಗುಂಡಿಮಾಳ ಗ್ರಾಮದಲ್ಲಿ ಜರುಗಿದೆ.

ಹನೂರು: ಕಳೆದ 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವನ ಶವ ಮನೆಯ ಹಿಂಭಾಗದ ಶೌಚಗುಂಡಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಗುಂಡಿಮಾಳ ಗ್ರಾಮದಲ್ಲಿ ಜರುಗಿದೆ.
ಹನೂರು ತಾಲೂಕು ವ್ಯಾಪ್ತಿಯ ಗುಂಡಿಮಾಳ ಗ್ರಾಮದ ರಾಜಶೇಖರಮೂರ್ತಿ ಎಂಬಾತ ಮೃತಪಟ್ಟಿರುವ ವ್ಯಕ್ತಿಯಾಗಿದ್ದು, ಈತನ ಶವ ಅವರ ಮನೆಯ ಹಿಂಭಾಗದ ಶೌಚಾಲಯದ ಗುಂಡಿಯಲ್ಲಿ ಪತ್ತೆಯಾಗಿದೆ.
ಗುಂಡಿಮಾಳ ಗ್ರಾಮದ ರಾಜಶೇಖರಮೂರ್ತಿ ಜೂನ್ 24ರಿಂದ ಕಾಣೆಯಾಗಿದ್ದಾನೆ ಎಂಬುದಾಗಿ ಜೂನ್ 26ರಂದು ಆತನ ತಂದೆ ಮಹಾದೇವಸ್ವಾಮಿ ಹನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆದರೆ ಇಂದು ಗ್ರಾಮದಲ್ಲಿ ರಾಜಶೇಖರಮೂರ್ತಿಯ ಕೊಲೆಯಾಗಿದೆ ಎಂಬುವ ಮಾತುಗಳು ಕೇಳಿಬರುತ್ತಿದ್ದವು. ಇದಕ್ಕೆ ಇಂಬು ನೀಡುವಂತೆ ಅವರ ಮನೆಯ ಹಿಂಬಾಗದ ಶೌಚಗೃಹದಿಂದ ದುರ್ವಾಸನೆ ಬರಲು ಪ್ರಾರಂಭಿಸಿತ್ತು. ಈ ವೇಳೆಗೆ ಈ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಕೂಡಲೇ ಹನೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಹನೂರು ಸಿಪಿಐ ಸಂತೋಷ್ ಕಶ್ಯಪ್ ಮತ್ತು ಸಿಬ್ಬಂದಿ ಸ್ಥಳಕ್ಕಾಗಮಿಸಿ ಗುಂಡಿಯನ್ನು ತೆಗೆಸಿ ನೋಡಿದಾಗ ರಾಜಶೇಖರಮೂರ್ತಿಯ ಶವ ದೊರೆತಿದೆ. ಕೂಡಲೇ ಮೃತದೇಹವನ್ನು ಚಾಮರಾಜನಗರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಿ ತನಿಖೆ ಕೈಗೊಂಡಿದ್ದಾರೆ. ಈ ಸಂದರ್ಭದಲ್ಲಿ ಪೇದೆಗಳಾದ ರಾಘವೇಂದ್ರ, ಬಿಳಿಗೌಡ, ರಾಮಶೆಟ್ಟಿ ಇನ್ನಿತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


