ರಾಜ್ಯ

ನೀರಾವರಿ ಯೋಜನೆ ಅನುಷ್ಠಾನದಲ್ಲಿ ಲೋಪ ದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ: ಬಿ.ಎಸ್. ಯಡಿಯೂರಪ್ಪ

ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ನೀರಾವರಿ ಯೋಜನೆ ಅನುಷ್ಠಾನದಲ್ಲಿ ಲೋಪ ದೋಷಗಳು ಕಂಡುಬಂದಲ್ಲಿ ಕಠಿಣ ಕ್ರಮ: ಬಿ.ಎಸ್. ಯಡಿಯೂರಪ್ಪ
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿನ ಸಭೆಯಲ್ಲಿ ಹಿರಿಯ ಅಧಿಕಾರಿಗಳು
Published On :

ಬೆಂಗಳೂರು: ನೀರಾವರಿ ಯೋಜನೆಗಳನ್ನು ಯಾವುದೇ ಲೋಪವಿಲ್ಲದಂತೆ ಅನುಷ್ಠಾನಗೊಳಿಸಬೇಕು. ಲೋಪ ದೋಷಗಳು ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. 

ಎತ್ತಿನಹೊಳೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಮುಖ್ಯಮಂತ್ರಿ, ಕಾಮಗಾರಿಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಿದರು.

ಎತ್ತಿನಹೊಳೆ ಯೋಜನೆಯಲ್ಲಿ ಈ ವರೆಗೆ 9003.86 ಕೋಟಿ ರೂ. ವೆಚ್ಚವಾಗಿದ್ದು, ಮೊದಲ ಹಂತದಲ್ಲಿ ಜುಲೈ ಅಂತ್ಯದೊಳಗೆ ವೇದಾವತಿ ವ್ಯಾಲಿಗೆ ನೀರು ಹರಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು. ಎತ್ತಿನಹೊಳೆ ಯೋಜನೆಯು ಏಳು ಜಿಲ್ಲೆಯ 29 ತಾಲ್ಲೂಕುಗಳ 6557 ಗ್ರಾಮಗಳ 68 ಲಕ್ಷಕ್ಕೂ ಹೆಚ್ಚು ಜನರಿಗೆ ಕುಡಿಯುವ ನೀರು ಒದಗಿಸಲಿದೆ.

ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಣೆ ಮಾಡುವ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿಯಿದೆ. ಈ ಬಗ್ಗೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ‌ ಚರ್ಚಿಸಲಾಗಿದ್ದು ಶೀಘ್ರ ‌ಅನುಮೋದನೆ ನೀಡಲು‌ ಕೋರಲಾಗಿದೆ. ಅಗತ್ಯ ಬಿದ್ದರೆ ಕೇಂದ್ರ ಸಚಿವರನ್ನು ಖುದ್ದು ಭೇಟಿ ಮಾಡಿ‌ ಮಂಜೂರಾತಿಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು.

ಈ ಯೋಜನೆಯಡಿ ಕಳೆದ ರಡು ವರ್ಷಗಳಲ್ಲಿ 2362.62 ಕೋಟಿ ರೂ. ಗಳ ಆರ್ಥಿಕ ಪ್ರಗತಿಯನ್ನು ಸಾಧಿಸಲಾಗಿದ್ದು, ಈ ಯೋಜನೆಯಿಂದ ತುಮಕೂರು, ಚಿತ್ರದುರ್ಗಹಾಗೂ ದಾವಣಗೆರೆ ಜಿಲ್ಲೆಗಳಿಗೆ ಅನುಕೂಲವಾಗಲಿದೆ.

ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣರೆಡ್ಡಿ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.