ರಾಜ್ಯ

ಜುಲೈ 1 ರಿಂದ ಬೆಂಗಳೂರಿನಲ್ಲಿ ಅನಿಯಮಿತ ಮೆಟ್ರೋ ರೈಲು ಸೇವೆ

ನಗರದಲ್ಲಿ ಅನ್‌ ಲಾಕ್‌ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಜುಲೈ 1ರಿಂದ‌ ಬೆಳಿಗ್ಗೆ 7ರಿಂದ ಸಂಜೆ 6ರವರೆಗೆ ಅನಿಯಮಿತ ಮೆಟ್ರೊ ರೈಲು ಸೇವೆ ಇರಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ ಸಿಎಲ್) ತಿಳಿಸಿದೆ.

ಜುಲೈ 1 ರಿಂದ ಬೆಂಗಳೂರಿನಲ್ಲಿ ಅನಿಯಮಿತ ಮೆಟ್ರೋ ರೈಲು ಸೇವೆ
ನಮ್ಮ ಮೆಟ್ರೋ ರೈಲು(ಸಾಂದರ್ಭಿಕ ಚಿತ್ರ)
Published On :

ಬೆಂಗಳೂರು: ನಗರದಲ್ಲಿ ಅನ್‌ ಲಾಕ್‌ ಪ್ರಕ್ರಿಯೆ ಆರಂಭಗೊಂಡ ಹಿನ್ನೆಲೆಯಲ್ಲಿ ನಗರದಲ್ಲಿ ಜುಲೈ 1 ರಿಂದ‌ ಬೆಳಿಗ್ಗೆ 7 ರಿಂದ ಸಂಜೆ 6ರವರೆಗೆ ಅನಿಯಮಿತ ಮೆಟ್ರೊ ರೈಲು ಸೇವೆ ಇರಲಿದೆ ಎಂದು ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ ಸಿಎಲ್) ತಿಳಿಸಿದೆ.

ವಾರಾಂತ್ಯದ ಕರ್ಪ್ಯೂ ಹಿನ್ನೆಲೆಯಲ್ಲಿ ಇರುವುದರಿಂದ ಶನಿವಾರ ಮತ್ತು ಭಾನುವಾರ ಮೆಟ್ರೊ ರೈಲು ಸಂಚಾರ ಇರುವುದಿಲ್ಲ ಎಂದೂ ನಿಗಮ ಪ್ರಕಟಣೆಯಲ್ಲಿ ತಿಳಿಸಿದೆ. 

ಜನದಟ್ಟಣೆಯ ಸಂದರ್ಭದಲ್ಲಿ ಪ್ರತಿ ಐದು ನಿಮಿಷ ಹಾಗೂ ಜನದಟ್ಟಣೆ ಇಲ್ಲದಾಗ 15 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸಲಿವೆ. ಆದರೆ, ಪ್ರಯಾಣಿಕರ ದಟ್ಟಣೆಯನ್ನು ಅವಲಂಬಿಸಿ ಎಂದು ಪ್ರಕಟಣೆ ಹೇಳಿದೆ.

ಪ್ರಯಾಣಿಕರು ತಮ್ಮ ಸ್ಮಾರ್ಟ್ ಕಾರ್ಡ್ ಗಳನ್ನು ನಿಗಮದ ವೆಬ್ ಸೈಟ್, ಆ್ಯಪ್ ಬಳಸಿ ರಿಚಾರ್ಜ್ ಮಾಡಿ ಕೊಳ್ಳಬಹುದು. ಅಲ್ಲದೆ, ಮೆಟ್ರೊ ನಿಲ್ದಾಣಗಳಲ್ಲಿನ ಕೌಂಟರ್ ಗಳಲ್ಲಿಯೂ ಎಟಿಎಂ ಕಾರ್ಡ್ ಅಥವಾ ನಗದು ಬಳಸಿ ಖರೀದಿ ಅಥವಾ ರಿಚಾರ್ಜ್ ಮಾಡಿಸಬಹುದು. ಟೋಕನ್ ಗಳನ್ನು ನಗದು ನೀಡಿ ಅಥವಾ ಸ್ಟಾಟಿಕ್‌ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿಯೂ ಖರೀದಿಸಬಹುದು.

ಲಾಕ್ ಡೌನ್ ಸಡಿಲಿಕೆ ನಂತರ, ಬೆಳಿಗ್ಗೆ 7 ರಿಂದ 11ರವರೆಗೆ ಮತ್ತು ಮಧ್ಯಾಹ್ನ‌ 3 ರಿಂದ 6 ರವರೆಗೆ, ಅಂದರೆ ದಿನದಲ್ಲಿ 7 ತಾಸು ಮಾತ್ರ ಮೆಟ್ರೊ ರೈಲು ಸಂಚರಿಸುತ್ತಿದ್ದವು. ಜುಲೈ 1 ರಿಂದ ದಿನದಲ್ಲಿ 11 ತಾಸು ಸೇವೆ ಲಭ್ಯವಾಗಲಿದೆ.‌

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.