ಹೊರಗೆ ತಿಂಡಿ-ತಿನಿಸು ತಿನ್ನಲು ಇದು ಸಕಾಲವಲ್ಲ: ಬಿಬಿಎಂಪಿ
ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಆತಂಕವನ್ನು ಹೆಚ್ಚಿಸಿದ್ದು, ಈ ಸಂದರ್ಭದಲ್ಲಿ ಹೊರಗೆ ತಿಂಡಿ-ತಿನಿಸು ತಿನ್ನಲು ಇದು ಸಕಾಲವಲ್ಲ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರು: ಡೆಲ್ಟಾ ಪ್ಲಸ್ ರೂಪಾಂತರಿ ಕೊರೋನಾ ವೈರಸ್ ಆತಂಕವನ್ನು ಹೆಚ್ಚಿಸಿದ್ದು, ಈ ಸಂದರ್ಭದಲ್ಲಿ ಹೊರಗೆ ತಿಂಡಿ-ತಿನಿಸು ತಿನ್ನಲು ಇದು ಸಕಾಲವಲ್ಲ ಎಂದು ಬಿಬಿಎಂಪಿ ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು, ಸಾಂಕ್ರಾಮಿಕ ರೋಗ ಸಂದರ್ಭದಲ್ಲಿ ರೆಸ್ಟೋರೆಂಟ್, ಬೀದಿಗಳಲ್ಲಿನ ತಿಂಡಿ-ತಿನಿಸು ತಿನ್ನಲು ಇದು ಸಕಾಲವಲ್ಲ. ರೂಪಾಂತರಿ ಕೊರೋನಾ ವೈರಸ್ ಅತ್ಯಂತ ವೇಗವಾಗಿ ಹರಡಿಲ್ಲಿದ್ದು, ಜನರು ಹೆಚ್ಚು ಜಾಗೃತರಾಗಿರಬೇಕಿದೆ. ಈ ಹಿಂದೆ ಫುಡ್ ಕೋರ್ಟ್ಸ್ ಗಳನ್ನು ಹೊರತುಪಡಿಸಿ ಕಳೆದ ವರ್ಷ ಅನುಮತಿ ನೀಡಿದಂತೆ ಈ ವರ್ಷವೂ ಮಾಲ್ ಗಳ ತೆರೆಯಲು ಅನುಮತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ರಸ್ತೆಗಳಲ್ಲಿ ಕಾರು, ಬೈಕ್ ಗಳಲ್ಲಿ ಹೋಗುವಾಗ ಸೀಟ್ ಬೆಲ್ಟ್, ಹೆಲ್ಮೆಟ್ ಧರಿಸುವುದನ್ನು ಯಾವ ರೀತಿ ಕಡ್ಡಾಯ ಮಾಡಲಾಗಿದೆಯೇ ಹಾಗೆಯೇ ಹೊರಗೆ ಬರುವವರಿಗೆ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡುವುದನ್ನೂ ಕಡ್ಡಾಯಗೊಳಿಸಲಾಗಿದೆ. ಪ್ರಸ್ತುತದ ಪರಿಸ್ಥಿತಿಯಲ್ಲಿ ಹೊರಗೆ ಊಟ ಮಾಡುವ ಚಿಂತನೆಗಳಿಂದ ಜನರು ದೂರ ಉಳಿಯುವುದು ಉತ್ತಮ ಎಂದು ತಿಳಿಸಿದ್ದಾರೆ.
ಬಸ್, ರೈಲು ನಿಲ್ದಾಣ ಹಾಗೂ ಹೆಚ್ಚೆಚ್ಚು ಜನರು ಸೇರುವ ಇತರೆ ಪ್ರದೇಶಗಳಲ್ಲಿ ಜನರನ್ನು ತಪಾಸಣೆ ನಡೆಸುವ ಕುರಿತು ಪೊಲೀಸ್ ಇಲಾಖೆಯೊಂದಿಗೆ ಮಾತುಕತೆ ನಡೆಸಲಾಗುತ್ತಿದೆ. ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ನಮ್ಮ ತಂಡ ಕಾರ್ಯನಿರ್ವಹಿಸುತ್ತಿದೆ ಎಂದಿದ್ದಾರೆ.
ಒಂದೇ ಮನೆಯಲ್ಲಿ ಹೆಚ್ಚು ಜನರಲ್ಲಿ ಸೋಂಕು ಕಂಡು ಬಂದಲ್ಲಿ ಅಂತಹ ಮನೆಗಳನ್ನು ಮೈಕ್ರೋ ಕಂಟೈನ್ಮೆಂಟ್ ವಲಯವನ್ನಾಗಿ ಪರಿಗಣಿಸಲಾಗುವುದು. ಸೋಂಕಿನ ಮೇಲೆ ನಿಗಾವಹಿಸಲು ಪಾಲಿಕೆ ಮೈಕ್ರೋ ಪ್ಲಾನ್ ಯೋಜನೆ ಸಿದ್ಧಪಡಿಸಿದ್ದು, ಇದರ ಅಡಿಯಲ್ಲಿಯೇ ಸೋಂಕಿತರ ಮನೆಯನ್ನು ಮೈಕ್ರೋ ಕಂಟೈನ್ಮೆಂಟ್ ವಲಯ ಎಂದು ಘೋಷಿಸಲಾಗುವುದು. ಈ ಕಂಟೈನ್ಮೆಂಟ್ ವಲಯದಲ್ಲಿ ಇರುವವರು ಹೊರಗೆ ಎಲ್ಲಿಯೂ ತಿರುಗಾಡದಂತೆ ಪಾಲಿಕೆ ಸಿಬ್ಬಂದಿ ಎಚ್ಚರಿಕೆ ವಹಿಸಲಿದ್ದಾರೆಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


