ವಿಜಯನಗರ: ನಿವೃತ್ತಿ ದಿನವೇ ಕೊರೋನಾಗೆ ಪಿಎಸ್ಐ ಬಲಿ
ತಮ್ಮ ನಿವೃತ್ತಿ ದಿನವೇ ಹೊಸಪೇಟೆ ಪಟ್ಟಣ ಠಾಣೆ ಪಿಎಸ್ಐ ಓರ್ವರು ಕೊರೋನಾಗೆ ಬಲಿಯಾಗಿದ್ದಾರೆ.

ವಿಜಯನಗರ: ತಮ್ಮ ನಿವೃತ್ತಿ ದಿನವೇ ಹೊಸಪೇಟೆ ಪಟ್ಟಣ ಠಾಣೆ ಪಿಎಸ್ಐ ಓರ್ವರು ಕೊರೋನಾಗೆ ಬಲಿಯಾಗಿದ್ದಾರೆ.
ಮೃತರನ್ನು 60 ವರ್ಷದ ಯಲ್ಲಪ್ಪ ಎಂದು ತಿಳಿದುಬಂದಿದೆ. ಮೂಲತಃ ಕೊಪ್ಪಳ ಜಿಲ್ಲೆಯ ಕುಷ್ಟಗಿಯವರಾಗಿದ್ದ ಅವರು ಕುಟುಂಬದೊಂದಿಗೆ ತಾಲ್ಲೂಕಿನ ಕೊಂಡನಾಯಕನಹಳ್ಳಿಯಲ್ಲಿ ವಾಸವಾಗಿದ್ದರು.
ವಾರದ ಹಿಂದೆ ಯಲ್ಲಪ್ಪ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಬಳಿಕ ಅವರನ್ನು ಕೊಪ್ಪಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಅವರು ಬುಧವಾರ ನಸುಕಿನ ಜಾವ ಮೃತಪಟ್ಟಿದ್ದಾರೆ.
ಬುಧವಾರ ಯಲ್ಲಪ್ಪ ಅವರು ಕರ್ತವ್ಯದಿಂದ ನಿವೃತ್ತಿ ಹೊಂದಲಿದ್ದರು. ಮೃತರು ಪತ್ನಿ, ಇಬ್ಬರೂ ಗಂಡು ಮಕ್ಕಳನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


