ರಾಜ್ಯ

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ

ರಾಜ್ಯದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲ್ ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರು ಆಗ್ರಹಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಮಾಲ್'ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರ ಆಗ್ರಹ: ಸಂಪುಟದೊಂದಿಗೆ ಚರ್ಚಿಸಿ ತೀರ್ಮಾನ ಎಂದ ಸಿಎಂ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಮಾಲ್ ಗಳ ತೆರೆಯಲು ಅನುಮತಿ ನೀಡುವಂತೆ ಮಾಲೀಕರು ಆಗ್ರಹಿಸುತ್ತಿದ್ದು, ಈ ಕುರಿತು ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ. 

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಮಾಲ್ ಗಳ ನಿಯೋಗದ ಸದಸ್ಯರು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಕೋವಿಡ್ ನಿಯಮ ಪಾಲಿಸಿ ಮಾಲ್ ಗಳನ್ನ ತೆರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ಸಂಪುಟ ಸಚಿವರೊಂದಿಗೆ ಚರ್ಚಿಸಿ ಈ ಕುರಿತು ನಿರ್ಧಾರ ಕೈಗೊಳ್ಳುತ್ತೇನೆ. ಕೊರೋನಾ ಸೋಂಕು ಕಡಿಮೆಯಾಗುತ್ತಿರುವುದು ಉತ್ತಮ ವಿಚಾರ. ಇಂತಹ ನಿರ್ಧಾರಕ್ಕೂ ಮುನ್ನ ಕೆಲವು ನಿರ್ಬಂಧಗಳನ್ನು ಹೇರಬೇಕಾಗುತ್ತದೆ. ಲಾಕ್ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿದವರಿಗೆ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.