ರಾಜ್ಯ

ಲಸಿಕೆ ಪಡೆದುಕೊಂಡು ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ಸಿಎಂ ಯಡಿಯೂರಪ್ಪ

ರಾಜ್ಯದ ಜನತೆ ಲಸಿಕೆ ಪಡೆದುಕೊಂಡು, ಸರ್ಕಾರದೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಲಸಿಕೆ ಪಡೆದುಕೊಂಡು ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ: ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Published On :

ಬೆಂಗಳೂರು: ರಾಜ್ಯದ ಜನತೆ ಲಸಿಕೆ ಪಡೆದುಕೊಂಡು, ಸರ್ಕಾರದೊಂದಿಗೆ ಕೋವಿಡ್ ವಿರುದ್ಧದ ಸಮರದಲ್ಲಿ ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ. ಎಸ್.ಯಡಿಯೂರಪ್ಪ ಮನವಿ ಮಾಡಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಕೊರೋನಾ ಸಾಂಕ್ರಾಮಿಕ ರೋಗವನ್ನು ನಿರ್ಲಕ್ಷ್ಯ ಮಾಡಬೇಡಿ. ನಾನೂ ಕೂಡ ಕೊರೋನಾ ಲಸಿಕೆ ಪಡೆದುಕೊಂಡಿದ್ದೇನೆ. ನಿಯಮಗಳ ಅನ್ವಯ ಎಲ್ಲಾ ಅರ್ಹರೂ ಕೋವಿಡ್ ಲಸಿಕೆ ಪಡೆದುಕೊಳ್ಳಿ ಎಂದು ಮನವಿ ಮಾಡಿದ್ದಾರೆ.

ಲಸಿಕೆ ಸಂಪೂರ್ಣವಾಗಿ ಸುರಕ್ಷಿತ ಮತ್ತು ಕೊರೋನಾ ಮಣಿಸಲು ಅಗತ್ಯವಾಗಿದೆ. ಇದರ ಜೊತೆಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ವಚ್ಛತೆ ಕಾಪಾಡುವುದನ್ನು ಮರೆಯದಿರಿ. ಕೋವಿಡ್ ಲಸಿಕೆ ಸಂಪೂರ್ಣ ಸುರಕ್ಷಿತ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಕೋವಿಡ್ ಲಸಿಕೆ ಪಡೆದುಕೊಳ್ಳಿ, ಇದು ನಿಮ್ಮ, ನಿಮ್ಮ ಕುಟುಂಬದ ಮತ್ತು ಸಮಾಜದ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಕೊರೋನಾ ವಿರುದ್ಧದ ಈ ಸಮರದಲ್ಲಿ ಸರ್ಕಾರದೊಂದಿಗೆ ಕೈಜೋಡಿಸಿ ಎಂದು ತಿಳಿಸಿದ್ದಾರೆ.

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು, ಕರ್ನಾಟಕ ಸೇರಿ ದೇಶದ ಕೆಲವು ರಾಜ್ಯಗಳಲ್ಲಿ ಆತಂಕ ಹೆಚ್ಚಾಗಿದೆ. ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಘೋಷಣೆಯಾಗುತ್ತದೆಯೇ ಎಂಬ ಆತಂಕ ಕೂಡ ಶುರುವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.