ಕಾರ್ಮಿಕರ ದಿನಾಚರಣೆ: ಮುಖ್ಯಮಂತ್ರಿ, ಗಣ್ಯರಿಂದ ಶುಭಾಶಯ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಮಿಕದ ದಿನದ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಮಿಕದ ದಿನದ ಶುಭಾಶಯ ಕೋರಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ದೇಶ ನಿರ್ಮಾಣದ ಕಾರ್ಯದಲ್ಲಿ ಮಹತ್ವದ ಪಾತ್ರವನ್ನು ನಿರ್ವಹಿಸುತ್ತಿರುವ ನಮ್ಮ ಲಕ್ಷಾಂತರ ಶ್ರಮಿಕರ, ಕಾರ್ಮಿಕರ ಪರಿಶ್ರಮ ಮತ್ತು ಬದ್ಧತೆ ಅನುಪಮವಾದದ್ದು. ಈ ಕಾರ್ಮಿಕರ ದಿನದಂದು ಅವರೆಲ್ಲರ ಸಮರ್ಪಣಾಭಾವ ಹಾಗೂ ಸಾಧನೆಗಳಿಗೆ ಅಭಿನಂದನೆ ಸಲ್ಲಿಸೋಣ ಎಂದು ತಿಳಿಸಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ಕಾರ್ಮಿಕ ಬಂಧುಗಳು ಎದುರಿಸುತ್ತಿರುವ ಕೊರೊನರೋಗದ ಸಂಕಷ್ಟದ ದಿನಗಳು ಶೀಘ್ರ ದೂರವಾಗಲಿ, ಸರ್ಕಾರ ಮತ್ತು ಸಮಾಜ ಕಾರ್ಮಿಕರ ಕಷ್ಟ-ನಷ್ಟಗಳಿಗೆಮಾನವೀಯವಾಗಿ ಸ್ಪಂದಿಸಲಿ. ವರ್ತಮಾನದದುರಿತವನ್ನು ಎದುರಿಸುವ ಚೈತನ್ಯ ಕಾರ್ಮಿಕ ಬಂಧುಗಳದ್ದಾಗಲಿ. ಕಾರ್ಮಿಕದಿನಾಚರಣೆಯ ಶುಭಾಶಯಗಳು ಎಂದು ಹಾರೈಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


