ರಾಜ್ಯ

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹಾಸಿಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು

ಕೊರೋನಾ ಸೋಂಕಿಗೊಳಗಾಗಿದ್ದ ವ್ಯಕ್ತಿಗೆ ಹಾಸಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ಕೋವಿಡ್ ಸೋಂಕಿತರಿಗೆ ಹಾಸಿಗೆ ನಿರಾಕರಿಸಿದ ಖಾಸಗಿ ಆಸ್ಪತ್ರೆ ವಿರುದ್ಧ ಪ್ರಕರಣ ದಾಖಲು
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೊರೋನಾ ಸೋಂಕಿಗೊಳಗಾಗಿದ್ದ ವ್ಯಕ್ತಿಗೆ ಹಾಸಿಗೆ ನಿರಾಕರಿಸಿದ ಹಿನ್ನೆಲೆಯಲ್ಲಿ ನಗರದ ಖಾಸಗಿ ಆಸ್ಪತ್ರೆ ವಿರುದ್ಧ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. 

ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿ ಪ್ರತಿಕ್ರಿಯೆ ನೀಡಿದ್ದು, ಮಲ್ಲೇಶ್ವರಂ ವಿಭಾಗದ ಬಿಬಿಎಂಪಿ ಆರೋಗ್ಯ ಅಧಿಕಾರಿ ಸುರೇಶ್ ರುದ್ರಪ್ಪ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಮಲ್ಲೇಶ್ವರಂನಲ್ಲಿರುವ ವೇಗೂಸ್ ಆಸ್ಪತ್ರೆ ವಿರುದ್ಧ ಎನ್ಡಿಎಂಎ ಕಾಯ್ದೆ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. 

ಈಗಾಗಲೇ ಆಸ್ಪತ್ರೆ ಆಡಳಿತ ಮಂಡಳಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ದೋಷಗಳು ಕಂಡು ಬಂದಿದ್ದೇ ಆದರೆ, ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ. 

ದೂರಿನಲ್ಲಿ ರುದ್ರಪ್ಪ ಅವರು, ಬಿಬಿಎಂಪಿ ಮಾರ್ಗಸೂಚಿ ಪ್ರಕಾರ ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡಬೇಕು. ಆದರೆ, ಆಸ್ಪತ್ರೆ ಸಿಬ್ಬಂದಿಗಳು ಕಳೆದ 2 ದಿನಗಳಿಂದ ಸೋಂಕಿತರನ್ನು ದಾಖಲು ಮಾಡಿಕೊಳ್ಳಲು ನಿರಾಕರಿಸಿದ್ದಾರೆ. ಏಪ್ರಿಲ್ 27-28 ರಂದು ಹಾಸಿಗೆಗಳು ಖಾಲಿಯಿಲ್ಲ ಎಂದು ಆಸ್ಪತ್ರೆ ಹೇಳಿತ್ತು. ನಂತರ ಆರೋಗ್ಯಾಧಿಕಾರಿಗಳು ಪರಿಶೀಲನೆ ನಡೆಸಿದಾಗ ಆಸ್ಪತ್ರೆ ತಪ್ಪು ಮಾಹಿತಿ ನೀಡಿರುವುದು ತಿಳಿದುಬಂದಿತ್ತು. ಇದಲ್ಲದೆ ಆಸ್ಪತ್ರೆ ಗಂಭೀರವಾದ ತಪ್ಪುಗಳನ್ನು ಮಾಡಿರುವುದು ಬಹಿರಂಗಗೊಂಡಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.