ಹಿಂಬದಿಯಿಂದ ಲಾರಿಗೆ ಲಾರಿ ಡಿಕ್ಕಿ: ಇಬ್ಬರ ದುರ್ಮರಣ
ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.

ಬೆಂಗಳೂರು: ಎರಡು ಲಾರಿಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ.
ತಮಿಳುನಾಡು ಮೂಲಕ ಪಾಷಾ (45) ಹಾಗೂ ಅಲ್ಲಾವುದ್ದೀನ್ (48) ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಘಟನೆಯಲ್ಲಿ ಮತ್ತೊಂದು ಲಾರಿಯ ಚಾಲಕರಾದ ಮುರುಗೇಶ್ (48) ಹಾಗೂ ಸುಬ್ರಮಣಿ (30) ಎಂಬುವವರು ಗಾಯಗೊಂಡಿದ್ದಾರೆಂದು ಸಂಚಾರ ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾನುವಾರ ನಸುಕಿನ ವೇಳೆ ಮೂರು ಗಂಟೆ ಸುಮಾರಿಗೆ ಮಹಾರಾಷ್ಟ್ರದ ಔರಂಗಾಬಾದ್ ನಿಂದ ಅರುಣ್ ಪಾಷಾ ಮತ್ತು ಅಲ್ಲಾವುದ್ದೀನ್ ಲಾರಿಯಲ್ಲಿ ಈರುಳ್ಳಇ ತುಂಬಿಕೊಂಡು ತಮಿಳುನಾಡಿನ ಕೊಯಮತ್ತೂರಿಗೆ ಹೋಗುತ್ತಿದ್ದರು. ಈ ವೇಳೆ ನೈಸ್ ರಸ್ತೆಯ ಮಂಗನಹಳ್ಳಿ ಮೇಲ್ಸೇತುವೆ ಬಳಿ ಪಶು ಆಹಾರ ತುಂಬಿಕೊಂಡು ಬರುತ್ತಿದ್ದ ಮುರುಗೇಶ್ ಮತ್ತು ಸುಬ್ರಮಣಿ ಅವರಿದ್ದ ಲಾರಿ ಹಿಂಬದಿಯಿಂದ ಪಾಷಾ ಅವರಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಗಳು ಪಲ್ಟಿ ಹೊಡೆದಿದ್ದು, ನೈಸ್ ರಸ್ತೆಯಿಂದ ತಡೆಗೋಡೆ ಡಿಕ್ಕಿಯಾಗಿ ಕಳಗೆ ಬಿದ್ದಿದೆ. ಸ್ಥಳದಲ್ಲಿಯೇ ಪಾಷಾ ಮತ್ತು ಅಲ್ಲಾವುದ್ದೀನ್ ಸಾವನ್ನಪ್ಪಿದ್ದಾರೆ.
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಲಾರಿ ಮತ್ತು ಈರುಳ್ಳಿ ಚೀಲಗಳನ್ನು ಒಂದೆಡೆ ಸರಿಸಿ ಇತರ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಬೆಳಿಗ್ಗೆ ದಾಸನಪುರದ ಎಪಿಎಂಸಿಯಿಂದ ಕೆಲ ಸಿಬ್ಬಂದಿ ಮತ್ತೊಂದು ಲಾರಿಯಲ್ಲಿ ಈರುಳ್ಳಿ ಮೂಟೆಗಳನ್ನು ತುಂಬಿಕೊಂಡಿ ಹೋಗಿದ್ದಾರೆಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


