ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ ವಿಧಿವಶ
ಅಲ್ಪ ಕಾಲದ ಅನಾರೋಗ್ಯದ ನಂತರ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮಂಗಳೂರು: ಅಲ್ಪ ಕಾಲದ ಅನಾರೋಗ್ಯದ ನಂತರ ಹಿರಿಯ ಪತ್ರಕರ್ತ ಸುರೇಂದ್ರ ಶೆಟ್ಟಿ (57) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕನ್ನಡಪ್ರಭ ಪತ್ರಿಕೆಯ ಮಂಗಳೂರು ಆವೃತ್ತಿ ಮುಖ್ಯಸ್ಥರಾಗಿ ಕೆಲ ಕಾಲ ಸೇವೆ ಸಲ್ಲಿಸಿದ್ದ ಸುರೇಂದ್ರ ಶೆಟ್ಟಿ ಮುಂಗಾರು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ವಿಜಯಕರ್ನಾಟಕ, ವಾರ್ತಾ ಭಾರತಿ ಮತ್ತಿತರ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.
ಬ್ರಹ್ಮಾವರದ ಆವರ್ಸೆ ಪಡುಮನೆಯಲ್ಲಿ ಜನಿಸಿದ ಸುರೇಂದ್ರ ಶೆಟ್ಟಿ ಮಂಗಳೂರು ವಿ.ವಿ. ಯ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರು. ಮಂಗಳೂರು ವಿ.ವಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ಹಳೆ ವಿದ್ಯಾರ್ಥಿಗಳ ಸಂಘ ಎಂಎಎಎಂ ಸ್ಥಾಪಕ ಗೌರವಾಧ್ಯಕ್ಷರಾಗಿದ್ದರು. ವಿಭಾಗದ ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾಗಿದ್ದರು. ಎಂಎಎಎಂ ಸಂಘಟನೆ ಮಂಗಳೂರಿನ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ಅವರಿಗೆ ಏರ್ಪಡಿಸಿದ ಮನೋಭಿನಂದನ ಸಮಾರಂಭದಲ್ಲಿ ಹೊರ ತಂದ ಮನೋಭಿನಂದನ ಅಭಿನಂದನಾ ಗ್ರಂಥದ ಸಂಪಾದಕರಾಗಿದ್ದರು.
ಕಳೆದ ಎರಡು ವರ್ಷಗಳಿಂದ ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ದುಡಿಯುತ್ತಿದ್ದ ಸುರೇಂದ್ರ ಶೆಟ್ಟಿ ಪತ್ನಿ, ಪುತ್ರಿ, ಕುಟುಂಬಸ್ಥರನ್ನು ಅಗಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


