ಹಾಸನದಲ್ಲಿ ವಾರದ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್: ಸಚಿವ ಗೋಪಾಲಯ್ಯ
ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ಪ್ರಮಾಣ ದಿನೇದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ ಗೋಪಾಲಯ್ಯ ತಿಳಿಸಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಕೊರೋನಾ ಸೋಂಕು ಹರಡುವಿಕೆ ಪ್ರಮಾಣ ದಿನೇದಿನೇ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ವಾರದಲ್ಲಿ ನಾಲ್ಕು ದಿನ ಸಂಪೂರ್ಣ ಲಾಕ್ ಡೌನ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ ಗೋಪಾಲಯ್ಯ ಅವರು ಬುಧವಾರ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಸನ ಜಿಲ್ಲೆ ಕೊರೋನಾ ಸೋಂಕು ಹರಡುವಿಕೆ ಪ್ರಮಾಣದಲ್ಲಿ ಎರಡನೇ ಸ್ಥಾನದಲ್ಲಿದೆ. ಕೊರೋನಾ ಹಾವಳಿ ಹತೋಟಿಗೆ ತರುವ ನಿಟ್ಟಿನಲ್ಲಿ ಸೋಮವಾರ, ಬುಧವಾರ, ಶುಕ್ರವಾರ ಬೆಳಗ್ಗೆ 6 ರಿಂದ 10 ಗಂಟೆ ವರೆಗೂ ಎಲ್ಲಾ ರೀತಿಯ ವ್ಯಾಪಾರ ವಹಿವಾಟಿಗೆ ಅವಕಾಶ ಕಲ್ಪಿಸಿ ಉಳಿದ ನಾಲ್ಕು ದಿನ ಹಾಲು- ಔಷಧಗಳನ್ನು ಹೊರತುಪಡಿಸಿ ಎಲ್ಲಾ ಅಂಗಡಿ ಮುಗ್ಗಟ್ಟುಗಳನ್ನು ಸಂಪೂರ್ಣ ಬಂದ್ ಮಾಡುವ ಆದೇಶ ಹೊರಡಿಸಲಾಗಿದೆ ಎಂದರು.
ಈ ಸಂಬಂಧ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗಿದೆ. ಇದಕ್ಕೆ ಜಿಲ್ಲೆಯ ಜನರು ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


