ದಾವಣಗೆರೆ: ಕೊರೋನಾ ಭೀತಿ ಹಿನ್ನಲೆ ರೈಲಿಗೆ ತಲೆಕೊಟ್ಟು ಪತ್ರಕರ್ತ ಆತ್ಮಹತ್ಯೆಗೆ ಶರಣು
ಚಲಿಸುವ ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.

ದಾವಣಗೆರೆ: ಚಲಿಸುವ ರೈಲಿಗೆ ತಲೆ ಕೊಟ್ಟು ಪತ್ರಕರ್ತರೋರ್ವರು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತ ಪರಮೇಶ್(46) ಅಮರಾವತಿ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ದಿನಗಳಿಂದ ಶೀತ, ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಕೊರೋನಾ ಬಂದರೆ ಏನು ಮಾಡುವುದು ಆತಂಕ ಶುರುವಾಗಿತ್ತು.
ಪರೀಕ್ಷೆ ಮಾಡಿಸಿಕೊಂಡು ಪಾಸಿಟಿವ್ ಬಂದರೆ ಎಲ್ಲಿ ಇರೋದು, ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಿಗುತ್ತಿಲ್ಲ. ಮುಂದೆ ಏನು ಎಂಬ ಚಿಂತೆಯಲ್ಲಿ ಪರಮೇಶ್ ಇದ್ದರು ಎಂದು ಅವರ ಆಪ್ತರು ತಿಳಿಸಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಗೆ ಅರೆಕಾಲಿಕ ವರದಿಗಾರರಾಗಿ ಕೆಲಸ ಮಾಡುತ್ತಿದ್ದ ಪರಮೇಶ್ ಅವರಿಗೆ ಪತ್ನಿ ಮತ್ತು ಇಬ್ಬರು ಗಂಡು ಮಕ್ಕಳಿದ್ದರು.
ಕುಂದೂರು ಗ್ರಾಮದಲ್ಲಿ ಇಂದು ಅಂತ್ಯಕ್ರಿಯೆ ನಡೆದಿದ್ದು ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


