ರಾಜ್ಯದಲ್ಲಿ ಮತ್ತೊಂದು ದುರಂತ: ಆಕ್ಸಿಜನ್ ಕೊರತೆಯಿಂದ ಹುಬ್ಬಳ್ಳಿಯಲ್ಲಿ 5 ಮಂದಿ ಕೊರೋನಾ ರೋಗಿಗಳ ಸಾವು!
ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.

ಹುಬ್ಬಳ್ಳಿ: ಚಾಮರಾಜನಗರ ಹಾಗೂ ಕಲಬುರಗಿ ಸಂಭವಿಸಿದ ಕೋವಿಡ್ ದುರಂತದ ಬಳಿಕ ಇಂತಹದ್ದೇ ಮತ್ತೊಂದು ದುರಂತ ಹುಬ್ಬಳ್ಳಿಯಲ್ಲಿ ಸಂಭವಿಸಿದೆ. ಆಕ್ಸಿಜನ್ ಕೊರತೆಯಿಂದಾಗಿ ಐವರು ಕೊರೋನಾ ಸೋಂಕಿತರು ಏಕಕಾಲಕ್ಕೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಹುಬ್ಬಳ್ಳಿಯ ಲೈಫ್'ಲೈನ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸೇರಿದಂತೆ ಐವರು ಸೋಂಕಿತರು ಮೃತಪಟ್ಟಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.
ಈ ನಡುವೆ ಸೋಂಕಿತರ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣ ಎಂದು ಮೃತಪಟ್ಟವರ ಸಂಬಂಧಿಕರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಜಿಲ್ಲಾ ಆಡಳಿತ ಮಂಡಳಿಯ ಅಧಿಕಾರಿಗಳು ನಿರಾಕರಿಸಿದ್ದಾರೆ.
ಆಸ್ಪತ್ರೆಯಲ್ಲಿ ಆಕ್ಸಿಜನ್ ಉತ್ಪಾದನಾ ಘಟಕವೇ ಇದೆ. ಘಟನೆ ಕುರಿತು ತಜ್ಞರ ಸಮಿತಿ ತನಿಖೆ ನಡೆಸುತ್ತಿದೆ. ತನಿಖೆ ಬಳಿಕ ಸತ್ಯಾಂಶಗಳು ಬಹಿರಂಗಗೊಳ್ಳಲಿವೆ ಎಂದು ಸ್ಪಷ್ಟಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


