ಬೆಂಗಳೂರಿನಲ್ಲಿ ಕೊರೋನಾ ಹೆಚ್ಚಳ: 168 ಸಾಮಾನ್ಯ ಬೆಡ್ ಆಕ್ಸಿಜನ್ ಯುಕ್ತ ಬೆಡ್ ಗಳಾಗಿ ಪರಿವರ್ತನೆ
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 168 ಸಾಮಾನ್ಯ ಬೆಡ್ ಗಳನ್ನು ಆಕ್ಸಿಜನ್‌ಯುಕ್ತ ಬೆಡ್ ಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ. ಸದ್ಯ ನಗರದ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಗಳಲ್ಲಿ 2 ಸಾವಿರ ಬೆಡ್ ಗಳು ಲಭ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 168 ಸಾಮಾನ್ಯ ಬೆಡ್ ಗಳನ್ನು ಆಕ್ಸಿಜನ್‌ಯುಕ್ತ ಬೆಡ್ ಗಳನ್ನಾಗಿ ಪರಿವರ್ತಿಸಲು ಸೂಚಿಸಲಾಗಿದೆ. ಸದ್ಯ ನಗರದ ಕೋವಿಡ್ ಸೋಂಕಿತರ ಆರೈಕೆ ಕೇಂದ್ರಗಳಲ್ಲಿ 2 ಸಾವಿರ ಬೆಡ್ ಗಳು ಲಭ್ಯವಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಹಾಸಿಗೆಗಳ ಪೈಕಿ ಶೇಕಡ 50ರಷ್ಟು ಆಕ್ಸಿಜನ್ ಹಾಸಿಗೆಗಳಾಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಈಗಿರುವ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಿ, ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಬಿಬಿಎಂಪಿ ಎಲ್ಲಾ ರೀತಿಯಿಂದಲೂ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.
ಕೋವಿಡ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸುತ್ತಿದ್ದೇವೆ. ಸೋಂಕನ್ನು ನಿಗ್ರಹಿಸಲು ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಸಹ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೆ 1 ಕೋಟಿಯ 16 ಲಕ್ಷದ 03 ಸಾವಿರದ 991 ಮಂದಿ ಮೇಲೆ ಕೊರೋನಾ ಪರೀಕ್ಷೆ ಮಾಡಲಾಗಿದ್ದು ಕಳೆದ 24 ಗಂಟೆಗಳಲ್ಲಿ 59 ಸಾವಿರದ 368 ಮಂದಿಯ ಮೇಲೆ ಪರೀಕ್ಷೆ ಮಾಡಲಾಗಿದೆ.
ನಿನ್ನೆಯ ಹೊತ್ತಿಗೆ ರಾಜಧಾನಿ ಬೆಂಗಳೂರಿನಲ್ಲಿ 8 ಲಕ್ಷದ 63 ಸಾವಿರದ 380 ಸೋಂಕಿತರಿದ್ದು, 5 ಲಕ್ಷದ 43 ಸಾವಿರದ 059 ಮಂದಿ ಗುಣಮುಖರಾಗಿದ್ದಾರೆ. ನಗರದಲ್ಲಿ ಇದುವರೆಗೆ 7 ಸಾವಿರದ 007 ಮಂದಿ ಮೃತಪಟ್ಟಿದ್ದು ನಿನ್ನೆ ಒಂದೇ ದಿನ 161 ಮಂದಿ ಮೃತರಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


