ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಸಾವು, ಇಬ್ಬರಿಗೆ ಗಂಭೀರ ಸುಟ್ಟಗಾಯ
ವಿಜಯಪುರ ನಗರದ ತಕ್ಕೆ ಮಸೀದಿ ಬಳಿ ಬುಧವಾರ ರಾತ್ರಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ವಿಜಯಪುರ: ವಿಜಯಪುರ ನಗರದ ತಕ್ಕೆ ಮಸೀದಿ ಬಳಿ ಬುಧವಾರ ರಾತ್ರಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.
ಭಾರೀ ಮಳೆಯಾಗುತ್ತಿದ್ದರಿಂದ ಮಸೀದಿ ಬಳಿ ಆಶ್ರಯ ಪಡೆದಿದ್ದ ಆಶೋಕ್ರಮ್ ಕಾರ್ ಜೋಳ್(48), ಬಾಷಾಸಾಬ್ ಕರಜಗಿ(40) ಹಾಗೂ ಜಾವೆದ್ ಜಾಲ್‍ಗೆರಿ(33) ಅವರಿಗೆ ಸಿಡಿಲು ಬಡಿದು ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಸಬೀನಾ ಮತ್ತು ಮತ್ತೊಬ್ಬ ಅಪರಚಿತ ವ್ಯಕ್ತಿಗೆ ಗಂಭೀರ ಸ್ವರೂಪದ ಸುಟ್ಟ ಗಾಯಗಳಾಗಿವೆ.
ಗದಗ ಜಿಲ್ಲೆಯ ನರಗುಂದ ತಾಲ್ಲೂಕಿನ ಹಡದಲಿ ಗ್ರಾಮದ ಬಳಿ ಬೇವಿನ ಮರದ ಕೆಳಗೆ ಆಶ್ರಯ ಪಡೆದಿದ್ದ 9 ಮೇಕೆಗಳು ಸಿಡಿಲು ಬಡಿದು ಸಾವನ್ನಪ್ಪಿವೆ. ಈ ಮಧ್ಯೆ,ವಿಜಯಪುರ, ಬಾಗಲಕೋಟೆ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಮುಂದುವರಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


