ರಾಜ್ಯ

ತೇಜಸ್ವಿ ಸೂರ್ಯ ಮಾಡಿರುವ ಕೆಲಸಕ್ಕೆ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪ

ಸಂಸದ ತೇಜಸ್ವಿ ಸೂರ್ಯ ಅವರು ಬಹಳ ಕಷ್ಟಪಟ್ಟು ರಿಸ್ಕ್ ತೆಗೆದುಕೊಂಡು ನಗರದಲ್ಲಿ ಬೆಡ್ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದ್ದ ವಿಷಯವನ್ನು ಬಯಲಿಗೆಳೆದಿದ್ದಾರೆ. ಸರ್ಕಾರದ ಗಮನಕ್ಕೆ ತಂದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶ್ಲಾಘಿಸಿದ್ದಾರೆ

ತೇಜಸ್ವಿ ಸೂರ್ಯ ಮಾಡಿರುವ ಕೆಲಸಕ್ಕೆ ಸರ್ಕಾರದ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Published On :

jfಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಅವರು ಬಹಳ ಕಷ್ಟಪಟ್ಟು ರಿಸ್ಕ್ ತೆಗೆದುಕೊಂಡು ನಗರದಲ್ಲಿ ಬೆಡ್ ಹಂಚಿಕೆಯಲ್ಲಿ ಅವ್ಯವಹಾರ ನಡೆಯುತ್ತಿದ್ದ ವಿಷಯವನ್ನು ಬಯಲಿಗೆಳೆದಿದ್ದಾರೆ. ಸರ್ಕಾರದ ಗಮನಕ್ಕೆ ತಂದು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಶ್ಲಾಘಿಸಿದ್ದಾರೆ.

ಈ ಮೂಲಕ ಸಂಸದ ತೇಜಸ್ವಿ ಸೂರ್ಯ ಅವರ ಕ್ರಮವನ್ನು ಮುಖ್ಯಮಂತ್ರಿ ಸಮರ್ಥಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ವಿಧಾನಸೌಧದಲ್ಲಿ ಒಂದು ಗಂಟೆ ಕುಳಿತುಕೊಂಡು ಮಾತನಾಡಿ ಬಿಗಿಯಾದ ಕ್ರಮ ಕೈಗೊಳ್ಳಲು ಹೇಳಿದ್ದೇನೆ. ತೇಜಸ್ವಿ ಸೂರ್ಯ ಅವರು ಮಾಡಿರುವ ಕೆಲಸಕ್ಕೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

ಕಾಂಗ್ರೆಸ್ ಶಾಸಕರು ಹಗುರವಾಗಿ ಮಾತನಾಡುವುದನ್ನು ನಿಲ್ಲಿಸಬೇಕು, ವಾಸ್ತವ ಸಂಗತಿಯನ್ನು ತೇಜಸ್ವಿ ಸೂರ್ಯ ಅವರು ಬಯಲಿಗೆಳೆದಿದ್ದಾರೆ. ಇಂತಹ ದಂಧೆ ನಿಲ್ಲಬೇಕು ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.