ರಾಜ್ಯ

ಚಿಕ್ಕಮಗಳೂರು ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಶಾಸಕ ಸಿ.ಟಿ. ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.

ಚಿಕ್ಕಮಗಳೂರು ಕೋವಿಡ್ ಪರಿಸ್ಥಿತಿ ಪರಿಶೀಲಿಸಿದ ಶಾಸಕ ಸಿ.ಟಿ. ರವಿ
ಆಸ್ಪತ್ರೆಯಲ್ಲಿ ಸಿ.ಟಿ ರವಿ ಪರಿಶೀಲನೆ
Published On :

ಚಿಕ್ಕಮಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿಟಿ ರವಿ ಚಿಕ್ಕಮಗಳೂರಿನ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರಿಸ್ಥಿತಿ ಬಗ್ಗೆ ಪರಿಶೀಲನೆ ನಡೆಸಿದರು.

ಪಿಪಿಇ ಕಿಟ್ ಧರಿಸಿ ವಿವಿಧ ಆಸ್ಪತ್ರೆಗಳಿಗೆ ಭೇಟಿ ನೀಡಿದ ರವಿ ಕೋವಿಡ್ ಎರಡನೇ ಅಲೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವಂತೆ ಸಿಬ್ಬಂದಿ ಮತ್ತು ಜಿಲ್ಲಾಡಳಿತಕ್ಕೆ ಸೂಚಿಸಿದರು. ಜಿಲ್ಲೆಯಲ್ಲಿ ಮೆಡಿಕಲ್ ಆಕ್ಸಿಜನ್ ಕೊರತೆಯಿಲ್ಲ, ಏಕೆಂದರೆ ಕೊರೋನಾ ಮೊದಲ ಅಲೆಯಲ್ಲಿಯೇ ಜಿಲ್ಲೆಯಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲಾಗಿತ್ತು.

ಪ್ರತಿನಿತ್ಯ ಕೋವಿಡ್ ವಾರ್ ರೂಂ ನ ಸಿಬ್ಬಂದಿ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.  ಚಾಮರಾಜನಗರ ದುರಂತದ ನಂತರ ಎಲ್ಲಾ ಸಚಿವರುಗಳಿಗೂ ತಮ್ಮ ತಮ್ಮ ಜಿಲ್ಲೆಯ ಕೋವಿಡ್ ಪರಿಸ್ಥಿತಿ ಪರಿಶೀಲನೆ ನಡೆಸುವಂತೆ ಸಿಎಂ ಯಡಿಯೂರಪ್ಪ ನಿರ್ದೇಶನ ನೀಡಿದ್ದರು.

ಕೊರೋನಾ ಸಾಂಕ್ರಾಮಿಕ ರೋಗವನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾಗಿದೆ, ಇಲ್ಲದಿದ್ದರೇ ಸರ್ಕಾರದ ವರ್ಚಸ್ಸಿಗೆ ಧಕ್ಕೆಯಾಗಲಿದೆ ಎಂದು ಸಿಎಂ ಯಡಿಯೂರಪ್ಪ ಅವರಿಗೆ ಸಿಟಿ ರವಿ ಪತ್ರ ಬರೆದಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.