ಕೋವಿಡ್-19: ರಾಜ್ಯದಲ್ಲಿ ಇಂದು ದಾಖಲೆಯ 592 ಮಂದಿ ಸಾವು, 48,781 ಹೊಸ ಸೋಂಕು ಪ್ರಕರಣ ದಾಖಲು!
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿನ ಮರಣ ಮೃದಂಗ ಮುಂದುವರೆದಿದ್ದು, ಬೆಂಗಳೂರಿನಲ್ಲಿ 346 ಸೇರಿದಂತೆ ರಾಜ್ಯಾದ್ಯಂತ ಮಹಾಮಾರಿಗೆ ಶುಕ್ರವಾರ ಒಂದೇ ದಿನ ದಾಖಲೆಯ 592 ಮಂದಿ ಬಲಿಯಾಗಿದ್ದಾರೆ.
ಹೌದು.. ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯಾದ್ಯಂತ ಕಳೆದ 24 ಗಂಟೆಗಳ ಅವಧಿಯಲ್ಲಿ 48,781 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, 592 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 48,781 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಆ ಮೂಲಕ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 18,38,885ಕ್ಕೆ ಏರಿಕೆಯಾಗಿದೆ.
ಅಂತೆಯೇ ರಾಜ್ಯದಲ್ಲಿ ಇಂದು ದಾಖಲೆಯ 592 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ ರಾಜ್ಯದಲ್ಲಿ 17, 804ಕ್ಕೆ ಏರಿಕೆಯಾಗಿದೆ. ಇನ್ನು 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ 28, 623 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 12,84,420ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 53,6,641ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 21376 ಹೊಸ ಸೋಂಕು ಪ್ರಕರಣ ದಾಖಲು
ಅಂತೆಯೇ ಕಳೆದ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರಿನಲ್ಲಿ 21376 ಹೊಸ ಸೋಂಕು ಪ್ರಕರಣಗಳು ದಾಖಲಾಗಿದೆ. ಆ ಮೂಲಕ ಸಿಲಿಕಾನ್ ಸಿಟಿಯಲ್ಲಿನ ಒಟ್ಟಾರೆ ಸೋಂಕಿತರ ಸಂಖ್ಯೆ 908462ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು 11784 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 558992ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಅತೀ ಹೆಚ್ಚು ಅಂದರೆ 346 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ನಗರದಲ್ಲಿ ಸೋಂಕಿಗೆ ಬಲಿಯಾದವರ ಸಂಖ್ಯೆ 7491ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


