ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಘಟಕಕ್ಕೆ ಸರ್ಕಾರದಿಂದ ಸಬ್ಸಿಡಿ ಸೌಲಭ್ಯ
ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ ಶೇಕಡಾ 70ರಷ್ಟು ವೆಚ್ಚವನ್ನು ಭರಿಸುವ ಮೂಲಕ ರಾಜ್ಯ ಸರ್ಕಾರ ಸಹಾಯಧನ ನೀಡಿ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ನೆರವಾಗಲಿದೆ.

ಬೆಂಗಳೂರು: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ವೈದ್ಯಕೀಯ ಅನಿಲ ಸೌಲಭ್ಯಗಳ ನವೀಕರಣಕ್ಕೆ ಶೇಕಡಾ 70ರಷ್ಟು ವೆಚ್ಚವನ್ನು ಭರಿಸುವ ಮೂಲಕ ರಾಜ್ಯ ಸರ್ಕಾರ ಸಹಾಯಧನ ನೀಡಿ ದ್ರವ ವೈದ್ಯಕೀಯ ಆಮ್ಲಜನಕ ಘಟಕಗಳ ಸ್ಥಾಪನೆಗೆ ನೆರವಾಗಲಿದೆ.
ಸರ್ಕಾರದ ಸಬ್ಸಿಡಿಯನ್ನು ಪಡೆಯಲು ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು ಆಯುಷ್ಮಾನ್ ಭಾರತ್ ಯೋಜನೆಯಡಿ ನೋಂದಾಯಿಸಿಕೊಂಡು ಸರ್ಕಾರ ನಿಗದಿಪಡಿಸಿದ ದರದಲ್ಲಿ ಬಡವರಿಗೆ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ನೀಡಬೇಕಾಗುತ್ತದೆ.
ಅಲ್ಲದೆ ಎಲ್ಲಾ ಸಮಯದಲ್ಲಿಯೂ ಸರ್ಕಾರಿ ಕೋಟಾದಡಿ ಬೆಡ್ ಗಳನ್ನು ರೋಗಿಗಳಿಗೆ ಕಾಯ್ದಿರಿಸಬೇಕು ಎಂದು ಖಾಸಗಿ ವೈದ್ಯಕೀಯ ಕಾಲೇಜುಗಳ ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯಸ್ಥರಿಗೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ತರಬೇತಿ ನೀಡುವ ಆಸ್ಪತ್ರೆಗಳಲ್ಲಿ ಎಲ್ಲಾ ಬೆಡ್ ಗಳು ದ್ರವ ಆಮ್ಲಜನಕ ಟ್ಯಾಂಕ್‌ಗಳಿಂದ ಪೈಪ್ ಸರಬರಾಜಿನ ಮೂಲಕ ಕೇಂದ್ರ ಆಮ್ಲಜನಕ ಮತ್ತು ಸಕ್ಷನ್ ಪಾಯಿಂಟ್ಸ್ ಗಳನ್ನು ಒಳಗೊಂಡಿರಬೇಕಾಗುತ್ತದೆ. ಪ್ರತಿ ಮೆಡಿಕಲ್ ಕಾಲೇಜುಗಳು ಪ್ರೆಶರ್ ಸ್ವಿಂಗ್ ಅಡ್ಸಾರ್ಪ್ಶನ್ ತಂತ್ರಜ್ಞಾನ ದ ಆಕ್ಸಿಜನ್ ಜನರೇಟರ್ ನ್ನು ಸ್ಥಾಪಿಸಿರಬೇಕಾಗುತ್ತದೆ, ಅಲ್ಲದೆ ದ್ರವ ಆಕ್ಸಿಜನ್ ಟ್ಯಾಂಕ್ ನ್ನು ಮುಂದಿನ ಆರು ತಿಂಗಳಲ್ಲಿ ಸ್ಥಾಪಿಸಬೇಕಾಗುತ್ತದೆ ಎಂದು ರಾಷ್ಟ್ರೀಯ ವೈದ್ಯಕೀಯ ಮಂಡಳಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


