ರಾಜ್ಯ

ಜೆಡಿಎಸ್ ಮುಖಂಡ ಆರ್. ರತನ್ ಸಿಂಗ್ ನಿಧನ: ಎಚ್.ಡಿ. ಕುಮಾರಸ್ವಾಮಿ ಸಂತಾಪ

ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷ ಆರ್. ರತನ್ ಸಿಂಗ್ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಜೆಡಿಎಸ್ ಮುಖಂಡ ಆರ್. ರತನ್ ಸಿಂಗ್ ನಿಧನ: ಎಚ್.ಡಿ. ಕುಮಾರಸ್ವಾಮಿ ಸಂತಾಪ
ಆರ್.ರತನ್ ಸಿಂಗ್
Published On :

ಬೆಂಗಳೂರು: ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷ  ಆರ್. ರತನ್ ಸಿಂಗ್ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಜೆಡಿಎಸ್ ಹಿರಿಯ ನಾಯಕನ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ, ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

"ಬೆಂಗಳೂರು ಮಹಾನಗರ ಜನತಾದಳ ಜಾತ್ಯತೀತ ಪಕ್ಷದ ಮಾಜಿ ಅಧ್ಯಕ್ಷರು, ಕರ್ನಾಟಕ ಪ್ರದೇಶ ಜನತಾದಳ ಜಾತ್ಯತೀತ ಪಕ್ಷದ ಹಿರಿಯ ಉಪಾಧ್ಯಕ್ಷ ರಾಗಿದ್ದ ಸ್ನೇಹಜೀವಿ, ಹಸನ್ಮುಖಿ ಶ್ರೀಯುತ ಆರ್. ರತನ್ ಸಿಂಗ್ ರವರು ಪಾರ್ಶ್ವವಾಯು ರೋಗದಿಂದ ಬಳಲುತ್ತಿದ್ದು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತೀವ್ರ ನೋವಾಗಿದೆ.

"ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಮತ್ತು ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬಕ್ಕೆ ಭಗವಂತನು ನೀಡಲೆಂದು ಪ್ರಾರ್ಥಿಸುತ್ತೇನೆ" ಎಂದು ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಅಲ್ಲದೆ ಪಕ್ಷದ ಮುಖಂಡ ಗ್ರಾಮ ಪಂಚಾಯಿತಿ ಸದಸ್ಯ ಅಡವಿಶ್ ಅವರ ನಿಧನಕ್ಕೆ ಕೂಡ ಕುಮಾರಸ್ವಾಮಿ ಇದೇ ಸಮಯದಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.