ರಾಜ್ಯ

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಮರ್ಥ ಹಂಚಿಕೆಗೆ ಕ್ರಮ: ಮುಖ್ಯ ನೋಡಲ್ ಅಧಿಕಾರಿಯಾಗಿ ತುಶಾರ್ ಗಿರಿನಾಥ್ ನೇಮಕ 

ನಗರದಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆ ಬಂದ ನಂತರ ಭಾರೀ ಸದ್ದು ಮಾಡುತ್ತಿದೆ. ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ, ರೆಮೆಡಿಸಿವಿರ್ ಔಷಧ, ಆಮ್ಲಜನಕ ವ್ಯತ್ಯಯ, ವೆಂಟಿಲೇಟರ್ ಸಮಸ್ಯೆ ಹೀಗೆ ಸಾಕಷ್ಟು ವೈದ್ಯಕೀಯ ಮೂಲಭೂತ ಸೌಕರ್ಯಗಳ ಸಮಸ್ಯೆ ಉಂಟಾಗುತ್ತಿದೆ.

ಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಮರ್ಥ ಹಂಚಿಕೆಗೆ ಕ್ರಮ: ಮುಖ್ಯ ನೋಡಲ್ ಅಧಿಕಾರಿಯಾಗಿ ತುಶಾರ್ ಗಿರಿನಾಥ್ ನೇಮಕ 
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆ ಬಂದ ನಂತರ ಭಾರೀ ಸದ್ದು ಮಾಡುತ್ತಿದೆ. ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ, ರೆಮೆಡಿಸಿವಿರ್ ಔಷಧ, ಆಮ್ಲಜನಕ ವ್ಯತ್ಯಯ, ವೆಂಟಿಲೇಟರ್ ಸಮಸ್ಯೆ ಹೀಗೆ ಸಾಕಷ್ಟು ವೈದ್ಯಕೀಯ ಮೂಲಭೂತ ಸೌಕರ್ಯಗಳ ಸಮಸ್ಯೆ ಉಂಟಾಗುತ್ತಿದೆ.

ಈ ನಿಟ್ಟಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೂಲಕ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಹಂಚಿಕೆ ಮಾಡುವ ವ್ಯವಸ್ಥೆ ಪಾರದರ್ಶಕವಾಗಿ ದಕ್ಷತೆಯಿಂದ ಸಾಗಲು ಹಲವು ವ್ಯವಸ್ಥೆಗಳನ್ನು ಸಂಯೋಜಿಸಲು ರಾಜ್ಯ ಕಾರ್ಯಕಾರಿ ಸಮಿತಿ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಶಾರ್ ಗಿರಿನಾಥ್ ಅವರನ್ನು ಮುಖ್ಯ ನೋಡಲ್ ಅಧಿಕಾರಿಯಾಗಿ ನೇಮಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.