ಆಕ್ಸಿಜನ್ ಕೊರತೆ: ಚಾಮರಾಜನಗರ ಸರ್ಕಾರಿ ಅಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವು!
ಮೇ 2ರ ದುರಂತದಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.

ಮೈಸೂರು: ಮೇ 2ರ ದುರಂತದಿಂದಾಗಿ ತೀವ್ರ ಆತಂಕಕ್ಕೆ ಒಳಗಾಗಿರುವ ಚಾಮರಾಜನಗರ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ ಹೆಚ್ಚುತ್ತಲೇ ಇದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 20 ಮಂದಿ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ.
ಭಾನುವಾರ ಒಂದೇ ದಿನ 15 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಕೋವಿಡೇತರ ರೋಗಿಗಳು ಹಾಗೂ ದೀರ್ಘಕಾಲಿಕ ರೋಗದಿಂದ ಬಳಲುತ್ತಿದ್ದ ಐವರು ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ಈಗಾಗಲೇ ರಾಜ್ಯ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.
ಇನ್ನು ಕರ್ನಾಟಕ ಲೋಕಾಯುಕ್ತ ಕೂಡ ಈ ಹಿಂದೆ ಸಂಭವಿಸದ 24 ಮಂದಿ ಸಾವಿನ ದುರಂತ ಪ್ರಕರಣವನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಭಾನುವಾರ ಒಂದೇ 930 ಹೊಸ ಸೋಂಕು ಪ್ರಕರಣ ಪತ್ತೆಯಾಗಿದ್ದು, 561 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ. ಜಿಲ್ಲೆಯಲ್ಲಿ ಇದೀಗ 4,748 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಇದಲ್ಲದೆ, ಜಿಲ್ಲೆಯಲ್ಲಿ ಭಾನುವಾರ ನಡೆಸಿದ 2,553 ಕೊರೋನಾ ಪರೀಕ್ಷೆಯಲ್ಲಿ ಶೇ.36ರಷ್ಟು ಮಂದಿಯಲ್ಲಿ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಹೇಳಲಾಗುತ್ತಿದೆ.
ಜಿಲ್ಲೆಯಲ್ಲಿ ಸೋಂಕು ವ್ಯಾಪಕಗೊಳ್ಳುತ್ತಿರುವುದು ಜನರಲ್ಲಿ ಆತಂಕವನ್ನು ಹೆಚ್ಚು ಮಾಡಿದೆ. ಆಶ್ಚರ್ಯಕರ ವಿಚಾರವೆಂದರೆ ಸಾರಿಗೆ ಸಂಪರ್ಕ ಇಲ್ಲದಿದ್ದರೂ, ಹೊರಗಿನವರ ಸಂಪರ್ಕ ಇಲ್ಲದಿದ್ದರೂ ಜಿಲ್ಲೆಯಲ್ಲಿರುವ 2 ಕುಗ್ರಾಮಗಳಲ್ಲಿ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಈ ಬೆಳವಣಿಗೆ ಇದೀಗ ಬುಡಕಟ್ಟು ಜನಾಂಗದವರಲ್ಲೂ ಆತಂಕ ಹುಟ್ಟಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


