ಖಡಕ್ ಪೋಲೀಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ತೆಲುಗು ನಟ ಜೂನಿಯರ್ ಎನ್.ಟಿ.ಆರ್. ಗೆ ಕೊರೋನಾ ಸೋಂಕು
ಖಡಕ್ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್, ತೆಲುಗು ನಟ ಜೂನಿಯರ್ ಎನ್.ಟಿ.ಆರ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ.

ಬೆಂಗಳೂರು/ಹೈದರಾಬಾದ್: ಖಡಕ್ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಯಾಗಿರುವ ರವಿ ಡಿ. ಚನ್ನಣ್ಣನವರ್ ತಮಗೆ ಕೊರೋನಾ ತಗುಲಿರುವ ಬಗ್ಗೆ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
ನಿನ್ನೆ ರವಿ ಅವರು ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದರು. ಇಂದು ಅವರ ವರದಿ ಬಂದಿದ್ದು ಅವರೊಡನೆ ಕಾರ್ಯನಿರ್ವಹಿಸಿದ್ದ ಅಧಿಕಾರಿಗಳೂ ಸಹ ಐಸೋಲೇಷನ್ ಆಗಿದ್ದಾರೆ.
ತೆಲುಗಿನ ಸ್ಟಾರ್ ನಟ ಜೂನಿಯರ್ ಎನ್.ಟಿ.ಆರ್. ಗೆ ಕೊರೋನಾ
ತೆಲುಗು ನಟ ಜೂನಿಯರ್ ಎನ್.ಟಿ.ಆರ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಅವರು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ನನಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಆದರೆ ಯಾರೂ ಆತಂಕಗೊಳ್ಳುವ ಅಗತ್ಯವಿಲ್ಲ. ನಾನು ಚೆನ್ನಾಗಿದ್ದೇನೆ.ನಾನು, ನನ್ನ ಕುಟುಂಬ ಎಲ್ಲಾ ಬಗೆಯ ಮುಂಜಾಗೃತ ಕ್ರಮ ಅನುಸರಿಸಿದ್ದೇವೆ. ನನ್ನ ಸಂಪರ್ಕಕ್ಕೆ ಬಂದವರು ಪರೀಕ್ಷಿಸಿಕೊಳ್ಳಿ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


