ಬೆಂಗಳೂರು: ಅಕ್ರಮವಾಗಿ ರೆಮ್ಡೆಸೆವಿರ್ ಔಷಧ ಮಾರಾಟ ಮಾಡುತ್ತಿದ್ದ ಇಬ್ಬರು ಸಿಸಿಬಿ ಬಲೆಗೆ!
ರೆಮಿಡಿಸಿವರ್ ಔಷಧಗಳ ಕೊರತೆಯಿಂದ ರೋಗಿಗಳು ಸಮಸ್ಯೆ ಅನುಭವಿಸುತ್ತಿರುವ ಮಧ್ಯೆಯೇ ರೆಮ್ಡೆಸೆವಿರ್ ಅಕ್ರಮವಾಗಿ ಮಾರಾಟಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇನ್ನು ಅಕ್ರಮ ರೆಮ್ಡೆಸೆವಿರ್ ಮಾರಾಟಗಾರರನ್ನು ಹೆಡೆಮುರಿ ಕಟ್ಟುತ್ತಿರುವ ಸಿಸಿಬಿ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಬೆಂಗಳೂರು: ರೆಮಿಡಿಸಿವರ್ ಔಷಧಗಳ ಕೊರತೆಯಿಂದ ರೋಗಿಗಳು ಸಮಸ್ಯೆ ಅನುಭವಿಸುತ್ತಿರುವ ಮಧ್ಯೆಯೇ ರೆಮ್ಡೆಸೆವಿರ್ ಅಕ್ರಮವಾಗಿ ಮಾರಾಟಮಾಡುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇನ್ನು ಅಕ್ರಮ ರೆಮ್ಡೆಸೆವಿರ್ ಮಾರಾಟಗಾರರನ್ನು ಹೆಡೆಮುರಿ ಕಟ್ಟುತ್ತಿರುವ ಸಿಸಿಬಿ ಇದೀಗ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಂಧಿತ ಆರೋಪಿಗಳಿಂ 8 ರೆಮ್ಡೆಸೆವಿರ್ ಇಂಜೆಕ್ಷನ್ ವಯಲ್ ವಶಕ್ಕೆ ಪಡೆಯಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಸಿಬಿ ಪೊಲೀಸರು ಔಷಧ ಹಾಗೂ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತ ಇಬ್ಬರು ಆರೋಪಿಗಳ ಪೈಕಿ ಓರ್ವ ನಗರ ಆಸ್ಪತ್ರೆಯೊಂದರಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಮತ್ತೊಬ್ಬ ಆ್ಯಂಬುಲೆನ್ಸ್ ಚಾಲಕನಾಗಿದ್ದಾನೆಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


