ವಲಸೆ ಕಾರ್ಮಿಕರ ನಿರ್ವಹಣೆಗೆ ಗ್ರಾಮ ಮಟ್ಟದಲ್ಲಿ ಕಾರ್ಯಪಡೆ ನಿಯೋಜನೆ
ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.

ಬೆಂಗಳೂರು: ಕೋವಿಡ್ ಎರಡನೇ ಅಲೆ ನಿಯಂತ್ರಿಸಲು ಸರ್ಕಾರ ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಲಸೆ ಕಾರ್ಮಿಕರನ್ನು ನಿರ್ವಹಿಸಲು ಹೆಚ್ಚುವರಿಯಾಗಿ ಕಾರ್ಯಪಡೆ ನಿಯೋಜಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾತ್ ರಾಜ್ ಇಲಾಖೆ ಹೊರಡಿಸಿರುವ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಗೆ ಸಲ್ಲಿಸಲಾಗಿದೆ. ಈ ಕಾರ್ಯಪಡೆ ವಲಸೆ ಕಾರ್ಮಿಕರು, ದುರ್ಬಲ ವರ್ಗದ ಜನರಿಗೆ ಆಹಾರ, ಮಾಸ್ಕ್ ಮತ್ತು ಸ್ಯಾನಿಟೈಸರ್ ಸ್ಯಾನಿಟೈಸರ್ ನೀಡಬೇಕೆಂದು ತಿಳಿಸಿದೆ.
ನಿರ್ಗತಿಕರು, ವಿಶೇಷವಾಗಿ ವಿಕಲಚೇತನರು, ಹಿರಿಯ ನಾಗರಿಕರು, ಮಾಜಿ ದೇವದಾಸಿಗಳು, ತೃತೀಯ ಲಿಂಗಿಗಳು ಮತ್ತು ಮಹಿಳೆಯರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಕಾರ್ಯಪಡೆಗಳಿಗೆ ನಿರ್ದೇಶಿಸಲಾಗಿದೆ.
ಹೆಚ್ಚಿನ ಜನರು ಲಸಿಕೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಅವರು ಕ್ರಮಗಳನ್ನು ತೆಗೆದುಕೊಳ್ಳಬೇಕು ಮತ್ತು ಎರಡನೇ ಡೋಸ್ ಪಡೆದ ನಂತರ ಅವರಿಗೆ ಪ್ರಮಾಣಪತ್ರವನ್ನು ನೀಡಬೇಕು ಎಂದು ತಿಳಿಸಿದೆ.
ಸ್ವಯಂಸೇವಕರನ್ನು ಕಾರ್ಯಪಡೆ ಗುರುತಿಸಬೇಕು ಮತ್ತು ಅವರ ಸಂಪರ್ಕ ಸಂಖ್ಯೆಗಳು ಎಲ್ಲರಿಗೂ ಲಭ್ಯವಾಗಬೇಕು. 14 ನೇ ಹಣಕಾಸು ಆಯೋಗದ ಅಡಿಯಲ್ಲಿ ಒದಗಿಸಲಾದ ಅನುದಾನದ ಬಾಕಿ, 16 ನೇ ಹಣಕಾಸು ಆಯೋಗದ ಅಡಿಯಲ್ಲಿ ಲಭ್ಯವಿರುವ ಹಣ ಬಳಸಿಕೊಂಡು, ಮಾಸ್ಕ್ ಮತ್ತು ಸಾಬೂನುಗಳಿಗಾಗಿ ವೆಚ್ಚವನ್ನು ಪೂರೈಸಲು ಅವರ ಸ್ವಂತ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ಗ್ರಾಮ ಪಚಾಯತ್‌ಗಳಿಗೆ ನಿರ್ದೇಶನ ನೀಡಿ, ಸಮುದಾಯ ಸಹಾಯವಾಣಿಗಳನ್ನು ಮಾಡಲು ಆರ್‌ಡಿಪಿಆರ್ ಇಲಾಖೆ ಕಾರ್ಯಪಡೆಗಳಿಗೆ ನಿರ್ದೇಶನ ನೀಡಿದೆ.
ಜಿಲ್ಲಾ ಪಂಚಾಯಿತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮತ್ತು ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಾರ್ಯಪಡೆಗಳಿಗೆ ಸಹಾಯ ಮಾಡುವಂತೆ ನಿರ್ದೇಶಿಸಲಾಗಿದೆ. ಆಯಾ ಗ್ರಾಮ ಪಂಚಾಯಿತಿಗಳೊಳಗಿನ ಪರಿಸ್ಥಿತಿಯನ್ನು ಚರ್ಚಿಸಲು ಮತ್ತು ವರದಿ ಮಾಡಲು ಪ್ರತಿ ಸೋಮವಾರ ಮತ್ತು ಗುರುವಾರ ಸಭೆಗಳನ್ನು ಕರೆಯುವಂತೆ ಕಾರ್ಯಪಡೆಗಳಿಗೆ ನಿರ್ದೇಶಿಸಲಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ಅವರಿಗೆ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ತರಬೇತಿ ನೀಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


