ರಾಜ್ಯ

ರಾಜ್ಯದಲ್ಲಿ ಕೊರೋನಾ ರಣಕೇಕೆ: 517 ಬಲಿ, ಬೆಂಗಳೂರಿನಲ್ಲಿ 16,286 ಸೇರಿ 39,998 ಮಂದಿಗೆ ಪಾಸಿಟಿವ್

ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಒಂದೇ ದಿನ ಬರೋಬ್ಬರಿ 517 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20,368ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾ ರಣಕೇಕೆ: 517 ಬಲಿ, ಬೆಂಗಳೂರಿನಲ್ಲಿ 16,286 ಸೇರಿ 39,998 ಮಂದಿಗೆ ಪಾಸಿಟಿವ್
ಕೋವಿಡ್-19 ಸೋಂಕು ಅಬ್ಬರ
Published On :

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು, ಮಹಾಮಾರಿಗೆ ಒಂದೇ ದಿನ ಬರೋಬ್ಬರಿ 517 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 20,368ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 39,998 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 20,53,191ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 16,286 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 9,99,805ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 275 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಇಂದು 34,752 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 14,40,621ಕ್ಕೆ ಏರಿಕೆಯಾಗಿದೆ. ಇನ್ನು 5,92,182 ಸಕ್ರೀಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.