ರಾಜ್ಯ

ಬ್ಲ್ಯಾಕ್‌ ಫಂಗಸ್‌ ಕುರಿತು ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ: ಡಾ. ಕೆ.ಸುಧಾಕರ್

ಬ್ಲ್ಯಾಕ್‌ ಫಂಗಸ್‌ ಕುರಿತು ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದ್ದಾರೆ.

ಬ್ಲ್ಯಾಕ್‌ ಫಂಗಸ್‌ ಕುರಿತು ವರದಿ ಬಳಿಕ ಚಿಕಿತ್ಸಾ ವಿಧಾನದ ಬಗ್ಗೆ ತೀರ್ಮಾನ: ಡಾ. ಕೆ.ಸುಧಾಕರ್
ಡಾ.ಕೆ. ಸುಧಾಕರ್‌
Published On :

ಬೆಂಗಳೂರು: ಬ್ಲ್ಯಾಕ್‌ ಫಂಗಸ್‌ ಕುರಿತು ಸಂಪೂರ್ಣವಾಗಿ ಅಧ್ಯಯನ ಮಾಡಿ ಎರಡು ದಿನಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ನಂತರ ಚಿಕಿತ್ಸಾ ವಿಧಾನದ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಗಳ ತಾಲ್ಲೂಕು ಆಸ್ಪತ್ರೆಗಳಲ್ಲಿನ ಚಿಕಿತ್ಸಾ ವ್ಯವಸ್ಥೆಯ ಪರಿಶೀಲನೆಗೆ ಬುಧವಾರ ಬೆಳಿಗ್ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವೆಡೆ ಕೋವಿಡ್‌ ನಂತರ ಬ್ಲ್ಯಾಕ್‌ ಫಂಗಸ್‌ ಪತ್ತೆಯಾಗಿದೆ. ಈ ಕುರಿತು ಪರಿಪೂರ್ಣವಾದ ವರದಿ ಕೈಸೇರಿದ ನಂತರ ಸರ್ಕಾರ ಯಾವ ನಿಲುವು ಹೊಂದುತ್ತದೆ ಎಂಬುದರ ಕುರಿತು ಇನ್ನು ಎರಡು ದಿನಗಳ ಒಳಗಾಗಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈಗಾಗಲೇ ನಗರ ಪ್ರದೇಶಗಳಿಂದ ಹಳ್ಳಿಗಳ ಕಡೆಗೆ ಸೋಂಕು ಹರಡುತ್ತಿರುವುದು ತಿಳಿದು ಬಂದಿದೆ. ಆದ್ದರಿಂದಲೇ ಜಿಲ್ಲಾ, ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯ ಹೆಚ್ಚಿಸಲಾಗುತ್ತಿದ್ದು, ಕೋವಿಡ್‌ ಕೇರ್‌ ಸೆಂಟರ್‌ಗಳು, ಸ್ಟೆಪ್‌ಡೌನ್‌ ಆಸ್ಪತ್ರೆಗಳನ್ನು ಪ್ರಾರಂಭಿಸಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.