ಡಿಸಿಎಂ ಲಕ್ಷ್ಮಣ ಸವದಿ ಸಹೋದರನ ಪುತ್ರ ಕೊರೋನಾದಿಂದ ಸಾವು
ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೋವಿಡ್ಗೆ ಬಲಿಯಾಗಿದ್ದಾರೆ.

ಬೆಳಗಾವಿ: ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರನ ಪುತ್ರ ವಿನೋದ್ ಸವದಿ ಕೋವಿಡ್ಗೆ ಬಲಿಯಾಗಿದ್ದಾರೆ.
ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ್ ಸವದಿ, ವಾರದ ಹಿಂದೆ ಕೋವಿಡ್ ಸೋಂಕಿಗೆ ತುತ್ತಾಗಿದ್ದರು. ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬುಧವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ.
ಈ ಬಗ್ಗೆ ಸಚಿವ ಲಕ್ಷ್ಮಣ ಸವದಿ ಟ್ವೀಟ್ ಮಾಡಿದ್ದು "ಕೃಷ್ಣಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಪರಪ್ಪ ಸವದಿ ಅವರ ಜೇಷ್ಠ ಪುತ್ರ ವಿನೋದ ಸವದಿ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ." ಎಂದು ಸಂತಾಪ ಸೂಚಿಸಿದ್ದಾರೆ.
ಬೆಳಗಾವಿ ಭಾಗದಲ್ಲಿ ಸಾರ್ವಜನಿಕ ಮತ್ತು ಸಾಮಾಜಿಕ ಕೆಲಸಗಳಲ್ಲಿ ಯುವ ಮುಖಂಡರಾಗಿ ವಿನೋದ್ ಸವದಿ ಗುರುತಿಸಿಕೊಂಡಿದ್ದರು.
ಕಳೆದ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ವಿನೋದ್ ಅವರು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ಉಚಿತವಾಗಿ ಹಂಚಿಕೆ ಸೇರಿ ಇತರ ಸಾಮಾಜಿಕ ಕೆಲಸಗಳಲ್ಲಿಯೂ ಅವಿರತವಾಗಿ ಕೆಲಸ ಮಾಡಿದ್ದರು.
ಕೇವಲ 36 ವರ್ಷಗಳಲ್ಲಿಯೇ ಅವರ ಬದುಕು ಅಂತ್ಯಗೊಂಡಿದ್ದು ನಿಜಕ್ಕೂ ಬೇಸರದ ಸಂಗತಿ ಎಂದು ವಿನೋದ ಅವರ ಆತ್ಮೀಯ ಸ್ನೇಹಿತರ ಬಳಗ ಕಂಬನಿ ಮಿಡಿದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


