ಕೋವಿಡ್-19: ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಬಿಬಿಎಂಪಿ ನಿರ್ಧಾರ
ಗಂಭೀರ ಸ್ಥಿತಿಗೆ ತಲುಪಿ ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ತಗ್ಗಿಸುವ ಸಲುವಾಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ನಿರ್ಧರಿಸಿದೆ.

ಬೆಂಗಳೂರು: ಗಂಭೀರ ಸ್ಥಿತಿಗೆ ತಲುಪಿ ಕೊನೆ ಕ್ಷಣದಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ತಗ್ಗಿಸುವ ಸಲುವಾಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ಬಿಬಿಎಂಪಿ ಅಧಿಕಾರಿಗಳು, ಪ್ರತೀ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಚಿಕಿತ್ಸಾ ಕೇಂದ್ರಗಳ ಸ್ಥಾಪನೆಗೆ ನಿರ್ಧರಿಸಿದೆ.
ಈ ಕುರಿತು ಮಾಹಿತಿ ನೀಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು, ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಚಿಕಿತ್ಸಾ ಕೇಂದ್ರ ಸ್ಥಾಪನೆಗೆ ಸೂಚಿಸಲಾಗಿದೆ. ಈ ಕೇಂದ್ರಗಳು 24*7 ಕಾರ್ಯನಿರ್ವಹಿಸಲಿವೆ. ಮೂರು ಪಾಳಿಯಲ್ಲಿ ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದಾರೆ. ಈ ಕೇಂದ್ರಗಳು ಹತ್ತಿರದಲ್ಲಿರುವ ಆಸ್ಪತ್ರೆಗಳನ್ನು ಸುಲಭವಾಗಿ ಸಂಪರ್ಕಿಸುವಂತಿರಲಿದೆ. ಚಿಕಿತ್ಸಾ ಕೇಂದ್ರಗಳಿಗೆ ತೆರಳುವ ರೋಗಿಗಳ ಸ್ಥಿತಿ ಗಂಭೀರವಾಗಿದ್ದರೆ, ಕೂಡಲೇ ಆಸ್ಪತ್ರೆಗೆ ದಾಖಲಿಸಲು ಇದು ಸಹಕಾರಿಯಾಗಿರಲಿದೆ ಎಂದು ಹೇಳಿದ್ದಾರೆ.
ಪ್ರತೀ ಕೇಂದ್ರದಲ್ಲಿಯೂ ಪರೀಕ್ಷೆ ನಡೆಸಲು, ವೈದ್ಯಕೀಯ ಸಲಹೆಗಳನ್ನು ಪಡೆಯಲು ಸೌಲಭ್ಯ ಕಲ್ಪಿಸಲಾಗಿರುತ್ತದೆ. ಚಿಕಿತ್ಸಾ ಕೇಂದ್ರಕ್ಕೆ ಬರುವ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರನ್ನು ಕೋವಿಡ್ ಕೇರ್ ಕೇಂದ್ರಕ್ಕೂ ಸ್ಥಳಾಂತರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕಿತರಿಗೆ 10 ದಿನಗಳಿಗಿಂತ ಹೆಚ್ಚುವರಿ ಚಿಕಿತ್ಸೆ ಅವಶ್ಯಕತೆ ಇದ್ದರೆ, ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ ಪೋರ್ಟಲ್‌ನಲ್ಲಿ 5 ದಿನ ಹೆಚ್ಚುವರಿ ಚಿಕಿತ್ಸೆ ಅವಶ್ಯ ಎಂದು (ಐದು ದಿನ ಹೆಚ್ಚುವರಿ ಅವಶ್ಯ ಎಂದು ನಮೂದಿಸಿ) ಅರ್ಜಿ ಸಲ್ಲಿಸಬೇಕು. ಎಲ್ಲಾ ಆಸ್ಪತ್ರೆಗಳ ನೋಡಲ್ ಅಧಿಕಾರಿಗಳು ಮತ್ತು ಆರೋಗ್ಯ ಮಿತ್ರ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಬೇಕು ಎಂದು ಸೂಚಿಸಿದ್ದಾರೆ.
ಆಸ್ಪತ್ರೆಗಳು ಪ್ರತಿ ಡಿಸ್ಚಾರ್ಜ್ ನ ಮಾಹಿತಿ ಕಡ್ಡಾಯವಾಗಿ ದಾಖಲಿಸಬೇಕು. ಒಂದೊಮ್ಮೆ ಹತ್ತು ದಿನಗಳ ನಂತರವೂ ಸೋಂಕಿತರ ಬಿಡುಗಡೆಯ ಬಗ್ಗೆ ನಿಖರ ಮಾಹಿತಿ ನೀಡದೆ ಇದ್ದರೆ, ನಿರ್ದಿಷ್ಟ ಹಾಸಿಗೆ ಖಾಲಿ ಇದೆ ಎಂದು ಪರಿಗಣಿಸಲಾಗುತ್ತದೆ. ಕೊರೋನಾ ಸೋಂಕಿನಿಂದ ಮೃತಪಟ್ಟವರ ಮಾಹಿತಿಯನ್ನು ಸಹ ತಡ ಮಾಡದೆ ಅಪ್ ಡೇಟ್ ಮಾಡಬೇಕು ಎಂದು ನಿರ್ದೇಶನ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


