ನರೇಗಾದಡಿ ಕೆಲಸಕ್ಕೆ ಸರ್ಕಾರ ಅನುಮತಿ, ಹೊಸ ನಿಯಮ ಜಾರಿ
ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.

ಬೆಂಗಳೂರು: ಲಾಕ್ ಡೌನ್ ಸಮಯದಲ್ಲಿ ನರೇಗಾದಡಿ ಕಾರ್ಮಿಕರಿಗೆ ಕೆಲಸ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಸರಣದ ಸರಪಳಿಯನ್ನು ಮುರಿಯಲು ಪರಿಷ್ಕೃತ ಮಾರ್ಗಸೂಚಿಗಳಿಗೆ ಒಂದು ಅನುಬಂಧವನ್ನು ಸಹ ಸರ್ಕಾರ ಬಿಡುಗಡೆ ಮಾಡಿದೆ.
ನರೇಗಾದಡಿ ಕೆಲಸ ಮಾಡಲು ಅವಕಾಶ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಗಳೊಂದಿಗೆ ಕೆಲಸ ಮಾಡುವ ಸ್ಥಳದಲ್ಲಿ 40ಕ್ಕಿಂತ ಹೆಚ್ಚು ಜನರು ಸೇರದಂತೆ ಸರ್ಕಾರ ಸೂಚಿಸಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ನರೇಗಾದಡಿ ಕೆಲಸ ನಿಲ್ಲಿಸಿದ್ದನ್ನು ಈ ಹಿಂದೆ ಸಾಮಾಜಿಕ ಕಾರ್ಯಕರ್ತರು ಮತ್ತು ದಿನಗೂಲಿ ನೌಕರರ ಒಕ್ಕೂಟ ಪ್ರಶ್ನಿಸಿತ್ತು. ಸರ್ಕಾರ ನಿರ್ಮಾಣ ಕೆಲಸಗಳಿಗೆ ಮತ್ತು ಬೆಂಗಳೂರು ಮೆಟ್ರೊ ರೈಲು ಕೆಲಸಕ್ಕೆ ಲಾಕ್ ಡೌನ್ ಸಮಯದಲ್ಲಿ ಅವಕಾಶ ನೀಡಿರುವಾಗ ನಗೇರಾದಡಿ ಕೆಲಸ ನಿಲ್ಲಿಸಿದ್ದೇಕೆ ಎಂದು ಕೇಳಿತ್ತು. ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಿ ವಲಸೆ ಕಾರ್ಮಿಕರಿಗೆ ನೆರವಾಗಬೇಕು ಎಂದು ಕೇಳಿಕೊಂಡಿದ್ದರು.
ಸರ್ಕಾರ ನಿರ್ಧಾರ ಮರು ಪರಿಶೀಲಿಸದಿದ್ದರೆ ಪ್ರತಿಭಟನೆ, ಧರಣಿ ನಡೆಸುವುದಾಗಿ ಕಾರ್ಯಕರ್ತ, ರಂಗ ನಿರ್ದೇಶಕ ಪ್ರಸನ್ನ ಕೂಡ ಎಚ್ಚರಿಕೆ ನೀಡಿದ್ದರು. ಗ್ರಾಮೀಣ ಪ್ರದೇಶಗಳಲ್ಲಿ ದಿನಗೂಲಿ ನೌಕರರಿಗೆ ಕೆಲಸ ನೀಡಬೇಕೆಂದು ಹೇಳಿದ್ದರು.
ಸರ್ಕಾರ ಮೇ 24ರವರೆಗೆ ಲಾಕ್ ಡೌನ್ ಘೋಷಿಸಿದ ಹಿನ್ನೆಲೆಯಲ್ಲಿ ಅನೇಕ ವಲಸೆ ಕಾರ್ಮಿಕರು ತಮ್ಮ ಗ್ರಾಮಕ್ಕೆ ಹಿಂತಿರುಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


