ಬೆಂಗಳೂರು: ತಾಯಿ ಮತ್ತು ಸಹೋದರನ ಶವದೊಂದಿಗೆ ಎರಡು ದಿನ ಕಳೆದ ಮಹಿಳೆ!
ಮಹಿಳೆಯೊಬ್ಬರು ತನ್ನ ತಾಯಿ ಹಾಗೂ ಸಹೋದರನ ಶವಗಳ ಜೊತೆಗೆ ಎರಡು ದಿನ ಮನೆಯಲ್ಲೇ ಕಳೆದಿರುವ ಘಟನೆ ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಬಿಇಎಂಎಲ್ ಬಡಾವಣೆಯಲ್ಲಿ ನಡೆದಿದೆ.

ಬೆಂಗಳೂರು: ಮಹಿಳೆಯೊಬ್ಬರು ತನ್ನ ತಾಯಿ ಹಾಗೂ ಸಹೋದರನ ಶವಗಳ ಜೊತೆಗೆ ಎರಡು ದಿನ ಮನೆಯಲ್ಲೇ ಕಳೆದಿರುವ ಘಟನೆ ರಾಜರಾಜೇಶ್ವರಿ ನಗರ ಠಾಣಾ ವ್ಯಾಪ್ತಿಯ ಬಿಇಎಂಎಲ್ ಬಡಾವಣೆಯಲ್ಲಿ ನಡೆದಿದೆ.
ತಾಯಿ ಆರ್ಯಾಂಬ (65) ಹಾಗೂ ಹರೀಶ್ (45) ಎಂಬುವರ ಮೃತದೇಹಗಳು ಮನೆಯಲ್ಲಿ ಪತ್ತೆಯಾಗಿದ್ದು, ಶ್ರೀಲಕ್ಷಿ ಎಂಬುವರು ಅದೇ ಮನೆಯಲ್ಲಿ ವಾಸವಿದ್ದ ಮಾನಸಿಕ ಅಸ್ವಸ್ಥೆ ಎನ್ನಲಾಗಿದೆ.
'ಬುಧವಾರ ಮಧ್ಯಾಹ್ನ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಅದೇ ಕಟ್ಟಡದಲ್ಲಿ ಬಾಡಿಗೆಗಿದ್ದ ಪ್ರವೀಣ್ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದರು. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ಮುರಿದು ಪ್ರವೇಶಿಸಿದಾಗ ಮೊದಲಿಗೆ ಕೋಣೆಯೊಂದರಲ್ಲಿ ಹರೀಶ್ ಮೃತಪಟ್ಟಿರುವುದು ಕಂಡುಬಂತು. ಮತ್ತೊಂದು ಕೋಣೆಯಲ್ಲಿ ಆರ್ಯಾಂಬ ಅವರ ಮೃತದೇಹ ಪತ್ತೆಯಾಯಿತು’ ಎಂದು ಪೊಲೀಸರು ತಿಳಿಸಿದರು'.
ಮನೆಯನ್ನು ಪರಿಶೀಲಿಸಿದಾಗ ಮತ್ತೊಂದು ಕೋಣೆಯಲ್ಲಿ ಶ್ರೀಲಕ್ಷ್ಮಿ ಇದ್ದರು. ಆದರೆ, ಅವರು ನಡೆಯುವ ಸ್ಥಿತಿಯಲ್ಲಿ ಇರಲಿಲ್ಲ. ಬಳಿಕ ಅವರು ಮಾನಸಿಕ ಅಸ್ವಸ್ಥರೆಂದು ತಿಳಿದು ಬಂತು. ಅವರಿಗೆ ಮನೆಯಲ್ಲಿ ಇಬ್ಬರೂ ಮೃತಪಟ್ಟಿರುವ ಅರಿವೂ ಇಲ್ಲ. ಅವರನ್ನು ಸದ್ಯ ರಕ್ಷಿಸಲಾಗಿದೆ.
ಈವರೆಗೆ ಅವರ ಸಾವಿಗೆ ನಿಖರ ಮಾಹಿತಿ ತಿಳಿದಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ವಿಚಾರ ತಿಳಿಯಲಿದೆ. ಘಟನೆ ಸಂಬಂಧ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಏ.25ರಂದು ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ನಲ್ಲಿ (ಆರ್‌ಎಟಿ) ಹರೀಶ್ ಅವರಿಗೆ ಕೊರೊನಾ ಸೋಂಕು ದೃಢವಾಗಿತ್ತು. ಅವರ ತಾಯಿಗೂ ಸೋಂಕು ತಗುಲಿ ಇಬ್ಬರು ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


