ರಾಜ್ಯ

ಬಂಟ್ವಾಳ: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋವಿಡ್ ಸೋಂಕಿತನ ವಿರುದ್ಧ ಕೇಸ್

ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾರ್ಕಳದಲ್ಲಿ ನಡೆದ ವಿವಾಹದಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಬಂಟ್ವಾಳ: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕೋವಿಡ್ ಸೋಂಕಿತನ ವಿರುದ್ಧ ಕೇಸ್
ಸಾಂದರ್ಭಿಕ ಚಿತ್ರ
Published On :

ಬಂಟ್ವಾಳ: ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಕಾರ್ಕಳದಲ್ಲಿ ನಡೆದ ವಿವಾಹದಲ್ಲಿ ಭಾಗಿಯಾಗಿದ್ದ ವ್ಯಕ್ತಿಯ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.

ಬಂಟ್ವಾಳ ಪಿಡಿಒ ದಾಖಲಿಸಿದ ದೂರಿನ ಅನ್ವಯ ಮಣಿನಲ್ಕೂರಿನ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಂಡು ಬಂದಿತ್ತು, ಮೇ 10 ರಂದು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರ್ ಟಿ-ಪಿಸಿಆರ್ ಪರೀಕ್ಷೆಯಲ್ಲಿ ಪಾಸಿಟಿವ್ ಪತ್ತೆಯಾಗಿತ್ತು ಎಂದು ಪಿಡಿಒ ಹೇಳಿದ್ದಾರೆ.

ಮೇ 13 ರಂದು ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದಾಗ, ಮನೆ ಲಾಕ್ ಆಗಿರುವುದು ಕಂಡು ಬಂದಿದೆ. ಮದುವೆಯಲ್ಲಿ ಪಾಲ್ಗೊಳ್ಳಲು ಕುಟುಂಬವು ಕಾರ್ಕಳಕ್ಕೆ ತೆರಳಿದೆ ಎಂದು ನೆರೆಹೊರೆಯವರು ತಿಳಿಸಿದ್ದಾರೆ. 

ನಂತರ ಪಿಡಿಒಗೆ ಕರೆ ಮಾಡಿದ ವ್ಯಕ್ತಿ ತಾನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮತ್ತೊಂದು ಪರೀಕ್ಷೆಯನ್ನು ಮಾಡಿಸಿದ್ದು ಅದರಲ್ಲಿ ಕೋವಿಡ್ ನೆಗೆಟಿವ್ ಬಂದಿದೆ ಎಂದು ಹೇಳಿದ್ದಾನೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.