ಮಂಗಳೂರು: ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ ನೀಡಿದ್ದ ಆಂಬ್ಯುಲೆನ್ಸ್ ಸಹಾಯಕ ಸೆರೆ
ಕೋವಿಡ್ -19 ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಬ್ಯುಲೆನ್ಸ್ ಸಹಾಯಕರನ್ನು ಪೊಲೀಸರು ಶುಕ್ರವಾರ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಧ್ಯ ಸಂತ್ರಸ್ತೆಯನ್ನು ಚಿಕಿತ್ಸೆಯ ಭಾಗವಾಗಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆದೊಯ್ಯಲಾಯಿತು.

ಮಂಗಳೂರು: ಕೋವಿಡ್ -19 ರೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಬ್ಯುಲೆನ್ಸ್ ಸಹಾಯಕರನ್ನು ಪೊಲೀಸರು ಶುಕ್ರವಾರ ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಸಧ್ಯ ಸಂತ್ರಸ್ತೆಯನ್ನು ಚಿಕಿತ್ಸೆಯ ಭಾಗವಾಗಿ ಸ್ಕ್ಯಾನಿಂಗ್ ಕೇಂದ್ರಕ್ಕೆ ಕರೆದೊಯ್ಯಲಾಯಿತು.
ಏಪ್ರಿಲ್ 27 ರಂದು ಈ ಘಟನೆ ನಡೆದಿದೆ ಎಂದು ಪೆರಿಂತಲಮಣ್ಣಪೊಲೀಸರು ತಿಳಿಸಿದ್ದಾರೆ ಆದರೆ ಸಂತ್ರಸ್ತೆ ಈ ಬಗ್ಗೆ ಈಗಷ್ಟೇ ವೈದ್ಯರಲ್ಲಿ ಮಾಹಿತಿ ನೀಡಿದ್ದಾರೆ. ಆಸ್ಪತ್ರೆಯಿಂದ ಮಾಹಿತಿ ಪಡೆದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸಂತ್ರಸ್ತೆ ನ್ಯುಮೋನಿಯಾ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಂಡೂರು ಮೂಲದ ರೋಗಿಗೆ ಆಂಬ್ಯುಲೆನ್ಸ್ ಸಹಾಯಕ ಪ್ರಶಾಂತ್ ಲೈಂಗಿಕ ಕಿರುಕುಳ ನೀಡಿದ್ದು, ಏಪ್ರಿಲ್ 27 ರಂದು ಆಂಬ್ಯುಲೆನ್ಸ್‌ನಲ್ಲಿ ಆಕೆಗೆ ಈ ಬಗೆಯಲ್ಲಿ ಕಿರುಕುಳ ನೀಡಲಾಗಿತ್ತು. ಆದರೆ ಈ ಘಟನೆ ಬಗ್ಗೆ ದೂರು ಸಲ್ಲಿಸಲು ಮಾಡಿದ ವಿಳಂಬಕ್ಕೆ ಕಾರಣವೆಂದರೆ ಸಂತ್ರಸ್ತೆ ಘಟನೆಯ ನಂತರ ದೈಹಿಕವಾಗಿ ಮತ್ತು ಮಾನಸಿಕವಾಗಿ ಕುಗ್ಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೆ ಮುನ್ನ ಕೇರಳದ ತಿರುವನಂತಪುರಂ ಹಾಗೂ ಪಥನಮತ್ತಟ್ಟ ಜಿಲ್ಲೆಗಳಲ್ಲಿ ಸಹ ಇಂತಹಾ ಘಟನೆಗಳು ವರದಿಯಾಗಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


