ಕೋವಿಡ್-19: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಚೇತರಿಕೆ ಪ್ರಮಾಣದಲ್ಲಿ ಹೆಚ್ಚಳ, 403 ಸಾವು!
ರಾಜ್ಯದಲ್ಲಿಂದು ಹೊಸ ಕೋವಿಡ್-19 ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಇಂದು 36 ಸಾವಿರದ 475 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 1581457ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿಂದು ಹೊಸ ಕೋವಿಡ್-19 ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಇಂದು 36 ಸಾವಿರದ 475 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಆಸ್ಪತ್ರೆಯಿಂದ ಬಿಡುಗಡೆಯಾದವರ ಒಟ್ಟು ಸಂಖ್ಯೆ 1581457ಕ್ಕೆ ಏರಿಕೆಯಾಗಿದೆ.
31 ಸಾವಿರದ 531 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಕೋವಿಡ್-19 ಸೋಂಕಿನ ಖಚಿತ ಪ್ರಕರಣಗಳ ಒಟ್ಟು ಸಂಖ್ಯೆ 2203462 ಆಗಿದೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 600147 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 403 ಮಂದಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಸೋಂಕಿನಿಂದ ಒಟ್ಟಾರೇ, ಮೃತಪಟ್ಟವರ ಸಂಖ್ಯೆ 21, 837ಕ್ಕೆ ಏರಿಕೆಯಾಗಿದೆ. ಸೋಂಕಿನ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ ಶೇ. 27.84 ರಷ್ಟಿದ್ದು, ಮರಣ ಪ್ರಮಾಣ ಶೇ. 1.27 ರಷ್ಟಿದೆ. ಬೆಂಗಳೂರು ನಗರದಲ್ಲಿ 8344 ಪ್ರಕರಣಗಳು ವರದಿಯಾಗಿದ್ದು, 143 ಮಂದಿ ಸಾವನ್ನಪ್ಪಿದ್ದಾರೆ. 13612 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


