ರಾಜ್ಯ

ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರ ಸಾವು, ವರದಿ ನೀಡುವಂತೆ ಸುರೇಶ್ ಕುಮಾರ್ ಸೂಚನೆ

ಕೋವಿಡ್‌ ಕಾರ್ಯದಲ್ಲಿ‌ ತೊಡಗಿಸಿಕೊಂಡಿದ್ದ ಹಾಗೂ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರ ಸಾವನ್ನು ಗಂಭೀರವಾಗಿ ಪರಿಗಣಿಸಿರುವ ಸಚಿವ ಎಸ್‌. ಸುರೇಶ್ ಕುಮಾರ್‌ ಈ ಕುರಿತು ಕೂಡಲೇ ಶಿಕ್ಷಕವಾರು ವರದಿಯನ್ನು ಮಂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಉಪ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಶಿಕ್ಷಕರ ಸಾವು, ವರದಿ ನೀಡುವಂತೆ ಸುರೇಶ್ ಕುಮಾರ್ ಸೂಚನೆ
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Published On :

ಬೆಂಗಳೂರು: ಕೋವಿಡ್‌ ಕಾರ್ಯದಲ್ಲಿ‌ ತೊಡಗಿಸಿಕೊಂಡಿದ್ದ ಹಾಗೂ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ ಹಲವು ಶಿಕ್ಷಕರು ಹಾಗೂ ಪದವಿಪೂರ್ವ ಉಪನ್ಯಾಸಕರ ಸಾವನ್ನು  ಗಂಭೀರವಾಗಿ ಪರಿಗಣಿಸಿರುವ ಸಚಿವ ಎಸ್‌. ಸುರೇಶ್ ಕುಮಾರ್‌ 
ಈ ಕುರಿತು ಕೂಡಲೇ ಶಿಕ್ಷಕವಾರು ವರದಿಯನ್ನು ಮಂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಳೆದ ಏಪ್ರಿಲ್ 2021ರಿಂದ ಇಲ್ಲಿಯವರೆಗೆ ಕೋವಿಡ್ ಕಾರಣದಿಂದ‌ ಮೃತಪಟ್ಟ ಶಿಕ್ಷಕರು ಹಾಗೂ ಉಪನ್ಯಾಸಕರ‌‌ ವಯಸ್ಸು, ಹಾಗೂ 
ಸಾವಿನ ಖಚಿತ ಕಾರಣಗಳೊಂದಿಗೆ ವರದಿ ಮಂಡಿಸುವಂತೆ  ಶಿಕ್ಷಣ‌ ಇಲಾಖೆಯ ಆಯುಕ್ತರು ಹಾಗೂ ಪದವಿಪೂರ್ವ ಶಿಕ್ಷಣ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. 

ಶಿಕ್ಷಕರ ಸಾವಿನ ಕುರಿತು ಪ್ರತಿಕ್ರಿಯಿಸಿರುವ ಸುರೇಶ್‌ಕುಮಾರ್, ಇದು ದುರದೃಷ್ಟಕರ ಸಂಗತಿ. ಶಿಕ್ಷಕರ ಕುಟುಂಬಗಳ ಬಗ್ಗೆ ತಮ್ಮ ತೀವ್ರವಾದ ಸಂತಾಪವಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.