ತೌಕ್ತೆ ಚಂಡಮಾರುತ: ರಾಜ್ಯದಲ್ಲಿ 8 ಮಂದಿ ಸಾವು, ಕರಾವಳಿ- ಮಲೆನಾಡಿನಲ್ಲಿ ವ್ಯಾಪಕ ಹಾನಿ
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಕೂಡಿದ ತೌಕ್ತೆ ಚಂಡಮಾರುತವು ಎಂಟು ಜನರನ್ನು ಬಲಿ ತೆಗೆದುಕೊಂಡಿದೆ.

ಮಂಗಳೂರು: ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ ಮತ್ತು ಗಾಳಿಯಿಂದ ಕೂಡಿದ ತೌಕ್ತೆ ಚಂಡಮಾರುತವು ಎಂಟು ಜನರನ್ನು ಬಲಿ ತೆಗೆದುಕೊಂಡಿದೆ.
ದುರ್ಘಟನೆಯೊಂದರಲ್ಲಿ ಮಂಗಳೂರು ಕರಾವಳಿಯ ಸಮುದ್ರದಲ್ಲಿ ಶನಿವಾರ ಅಲೆಯೆನ್ಸ್ ಹೆಸರಿನ ದೋಣಿ ಮುಳುಗಿದ್ದು, ಸ್ಥಳೀಯರು ಮೂವರನ್ನು ರಕ್ಷಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಇತರ ಮೂವರು ನಾಪತ್ತೆಯಾಗಿದ್ದಾರೆ.
ಕೋರಮಂಡಲ್ ಹೆಸರಿನ ದೋಣಿಯಲ್ಲಿದ್ದ 9 ಜನರ ರಕ್ಷಣೆಗಾಗಿ ಸೋಮವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್ ಆಗಮಿಸಿತ್ತು. ಈ ದೋಣಿ ಮುಲ್ಕಿ ಕರಾವಳಿಯಿಂದ ನಾಲ್ಕು ಮೈಲು ದೂರದಲ್ಲಿ ಸಮುದ್ರದೊಳಗೆ ಬಂಡೆಗಳಲ್ಲಿ ಸಿಲುಕಿಕೊಂಡಿತ್ತು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆ ಸೋಮವಾರ ಆರಂಭವಾಗಿದೆ. ಕರಾವಳಿ ರಕ್ಷಣಾ ಪಡೆಯ ಐಎನ್‍ಎಸ್ ವರಹಾ ನೌಕೆ ಮುಲ್ಕಿ ಬಂಡೆಗಳಿಂದ ಕೇವಲ 500 ಮೀಟರ್ ದೂರದಲ್ಲಿದ್ದು, ಪರಿಸ್ಥಿತಿಯನ್ನು ನಿಕಟವಾಗಿ ಪರಿಶೀಲಿಸಲಾಗುತ್ತಿದೆ.
ಈ ಮಧ್ಯೆ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಳೆ ನಿಂತಿದೆ. ತೌಕ್ತೆ ಚಂಡಮಾರುತದ ಪರಿಣಾಮ ಈ ತಿಂಗಳ 20ರವರೆಗೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು ಘಟಕ ತಿಳಿಸಿದೆ.
ಚಂಡಮಾರುತದಿಂದ ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ರಸ್ತೆಗಳು, ಮನೆಗಳು ಮತ್ತು ಇತರ ಕಟ್ಟಡಗಳಿಗೆ ವ್ಯಾಪಕ ಹಾನಿಯಾಗಿದೆ. ಜಿಲ್ಲೆಯಲ್ಲಿ ಶನಿವಾರದಿಂದ ಭಾರಿ ಮಳೆಯಾಗುತ್ತಿತ್ತು. ನದಿ ಹಾಗೂ ಕಾಲುವೆಗಳು ತುಂಬಿ ಹರಿಯುತ್ತಿವೆ. ಕಾಡನೂರು ಮತ್ತು ಬೇತ್ರಿಯಲ್ಲಿ ಕಾವೇರಿ ನದಿ ನೀರಿನ ಮಟ್ಟ ಗಣನೀಯ ಹೆಚ್ಚಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಿಂದ ಕಳೆದ 24 ತಾಸಿನಲ್ಲಿ 14 ಮನೆಗಳು ಹಾನಿಗೊಂಡಿದ್ದು, 108 ಮನೆಗಳು ಭಾಗಶಃ ಹಾನಿಗೊಂಡಿವೆ. ತಗ್ಗು ಪ್ರದೇಶಗಳ 380 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.ಈ ಕೇಂದ್ರಗಳಲ್ಲಿ ಎಲ್ಲರಿಗೂ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಯಾರೊಬ್ಬರಿಗಾದರೂ ಕೋವಿಡ್ ಸೋಂಕು ದೃಢಪಟ್ಟರೆ ಅಂತವರನ್ನು ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಸ್ಥಳಾಂತರಿಸಲಾಗುದ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


